ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಹಾಗೂ ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ–52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶಿಸಿದೆ.

ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಿರುವುದರಿಂದ, ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ಮಾರ್ಗವನ್ನು ಬಂದ್ ಮಾಡಲಾಗಿದೆ.

ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮುಂದುವರಿಯಲಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಭಿಷೇಕ್ ವಿ. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಪರ್ಯಾಯ ಮಾರ್ಗಗಳು: ತೀರ್ಥಹಳ್ಳಿ – ಕುಂದಾಪುರ (ಭಾರಿ ವಾಹನಗಳು): ತೀರ್ಥಹಳ್ಳಿ–ರಾವೆ–ಕಾನುಗೋಡು–ನಗರ–ಕೊಲ್ಲೂರು ಕುಂದಾಪುರ

ಯಡೂರು, ಮಾಸ್ತಿಕಟ್ಟೆ ಮಾರ್ಗ: ತೀರ್ಥಹಳ್ಳಿ– ಕಾನುಗೋಡು–ನಗರ– ಕೊಲ್ಲೂರು– ಕುಂದಾಪುರ

ಶಿವಮೊಗ್ಗ, ಸಾಗರದಿಂದ ಹೊಸನಗರ ಮಾರ್ಗ: ಶಿವಮೊಗ್ಗ–ಹೊನ್ನಾವರ ರಾಷ್ಟ್ರೀಯ ಹೆದ್ದಾರಿ– ಹೊನ್ನಾವರ– ಭಟ್ಕಳ– ಬೈಂದೂರು– ಕುಂದಾಪುರ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-42-2145994313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.