ಶಿವಮೊಗ್ಗ: ಜಿಲ್ಲೆಯಲ್ಲಿ ಕಿರಾಣಿ, ಬೀಡಿ ಅಂಗಡಿ, ಮನೆ ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅವರಿಗೆ ಮದ್ಯ ಪೂರೈಸುವ ವೈನ್ಶಾಪ್ಗಳ ಮೇಲೆ ಕ್ರಮ ಜರುಗಿಸುವಂತೆ ಶುಕ್ರವಾರ ಇಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಅಬಕಾರಿ ಇಲಾಖೆಯನ್ನು ಒತ್ತಾಯಿಸಿದರು.

‘ಕೂಲಿ ಕೆಲಸಕ್ಕೆ ಹೋಗುವವರು ಬೆಳಿಗ್ಗೆ 5 ಗಂಟೆಗೆ ಕುಡಿದು ಹೋಗುತ್ತಿದ್ದಾರೆ. ಅವರಿಗೆ ಅಷ್ಟು ಹೊತ್ತಿನಲ್ಲೇ ಸರಾಗವಾಗಿ ಮದ್ಯ ಸಿಗುತ್ತಿದೆ’ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದರು. ಇದಕ್ಕೆ ದನಿಗೂಡಿಸಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ‘ನನ್ನ ಕ್ಷೇತ್ರದ ಪರಿಶಿಷ್ಟ ಜಾತಿಯವರ ಕಾಲೊನಿಗಳಲ್ಲಿ 35 ವರ್ಷಕ್ಕಿಂತ ಮೇಲ್ಟಟ್ಟವರು ಬದುಕುತ್ತಿಲ್ಲ. ಕುಡಿದು ಸಾಯುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು. ಅದಕ್ಕೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅಚ್ಚರಿ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆರಗ, ‘ಇದೊಂದು ಗಂಭೀರ ಸಂಗತಿ. ವೈನ್ಶಾಪ್ನವರು ರಸ್ತೆ, ಏರಿಯಾಗಳನ್ನು ಹಂಚಿಕೊಂಡು ಅಕ್ರಮವಾಗಿ ಮಾರಾಟ ಮಾಡುವವರಿಗೆ ಮದ್ಯ ಪೂರೈಸುತ್ತಿದ್ದಾರೆ. ಬೀಟ್ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಅವರೇ ಮನೆ ಮನೆಗೆ ತೆರಳಿ ಮಾಮೂಲಿ ಸಂಗ್ರಹ ಮಾಡುತ್ತಿದ್ದಾರೆ. ಇದಂತೂ ಬಹಳಷ್ಟು ಆತಂಕಕಾರಿ ಸಂಗತಿ’ ಎಂದರು.

ಇದಕ್ಕೆ ಉತ್ತರಿಸಿದ ಜಿಲ್ಲಾ ಅಬಕಾರಿ ಅಧಿಕಾರಿ ಮುರಳಿ, ‘ಇಲ್ಲಿಯವರೆಗೂ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ 811 ಪ್ರಕರಣ ದಾಖಲಿಸಿದ ₹11.68 ಲಕ್ಷ ಸಂಗ್ರಹ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಕೆಡಿಪಿ ಸಭೆಯ ನಿರ್ಧಾರದಂತೆ ಬಾಟಲಿ ಮೇಲಿನ ಬ್ಯಾಚ್ ನಂ ಆಧರಿಸಿ ಯಾವ ಶಾಪ್ನಿಂದ ಅದು ಪೂರೈಕೆ ಆಗಿದೆ ಎಂಬುದನ್ನು ಪತ್ತೆ ಮಾಡಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಲೈಸೆನ್ಸ್ ರದ್ದುಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-341134287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.