ಶಿವಮೊಗ್ಗ: ‘ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಯಬಹುದು ಇಲ್ಲವೇ ಸ್ವತಂತ್ರವಾಗಿ ಚುನಾವಣೆ ಎದುರಿಸುವ ಸಂದರ್ಭವೂ ಬರಬಹುದು. ಹೀಗಾಗಿ ಕಾರ್ಯಕರ್ತರು ಮೈ ಮರೆತು ಕೂರದೇ ಪಕ್ಷದ ಸಂಘಟನೆಗೆ ಮುಂದಾಗಬೇಕು’ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಜೆಡಿಎಸ್ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಜೆಡಿಎಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಎಸ್ಟಿ ಘಟಕದ ಅಧ್ಯಕ್ಷ ಎಚ್.ಆರ್. ಹನುಮಂತಪ್ಪ ಅವರ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಜೆಡಿಎಸ್- ಬಿಜೆಪಿ ಮೈತ್ರಿಯ ಬಗ್ಗೆ ವಿರೋಧ ಪಕ್ಷಗಳ ಮಾತು ಬೇರೆಯೇ ಇದೆ. ಆದರೂ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಒಳ್ಳೆಯ ಖಾತೆ ಕೊಟ್ಟು ಔದಾರ್ಯ ತೋರಿದ್ದಾರೆ. ಆದರೆ, ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕು, ಕುಮಾರಣ್ಣ ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವುದು ಪಕ್ಷದ ಕಾರ್ಯಕರ್ತರ ಅಭಿಲಾಷೆ. ಹಾಗಾಗಿ ಮೈತ್ರಿಯ ನಡುವೆ ಕೆಲವು ಗೊಂದಲಗಳು ಇವೆ. ಇದೇ ಕಾರಣಕ್ಕೆ ಮೈತ್ರಿ ನಂಬಿಕೊಳ್ಳದೆ ಸ್ವತಂತ್ರವಾಗಿ ಚುನಾವಣೆ ಎದುರಿಸುವುದಕ್ಕೂ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕಿದೆ’ ಎಂದರು.

‘ಎನ್ಡಿಎ ಜೊತೆಗಿನ ಮೈತ್ರಿ ಬಗ್ಗೆ ನಮ್ಮದೇನು ತಕರಾರು ಇಲ್ಲ. ಮೈತ್ರಿ ಮುಂದುವರೆದರೆ ಸಂತೋಷ. ಮುಂದುವರೆಯದಿದ್ದರೂ ನಾವು ಸ್ವಂತ ಶಕ್ತಿ ಮೇಲೆ ಚುನಾವಣೆಗಳನ್ನು ಎದುರಿಸುವುದಕ್ಕೆ ಸಿದ್ಧರಾಗಬೇಕಿದೆ. ಮುಂದೆ ಸ್ಥಳೀಯ ಸಂಸ್ಥೆಗಳು, ಆನಂತರ ವಿಧಾನಸಭಾ ಚುನಾವಣೆಗಳು ಬರುತ್ತವೆ. ಹಾಗಾಗಿ ಪಕ್ಷದ ಕಾರ್ಯಕರ್ತರು ಪಕ್ಷದ ಸಂಘಟನೆಗೆ ದುಡಿಯಬೇಕು’ ಎಂದು ಸಲಹೆ ನೀಡಿದರು.

ಅಧಿಕಾರ ಸ್ವೀಕರಿಸಿದ ಎಚ್.ಆರ್. ಹನುಮಂತಪ್ಪ ಮಾತನಾಡಿ, ‘ಪಕ್ಷದಲ್ಲಿ ಸಣ್ಣ ಪುಟ್ಟ ಗೊಂದಲಗಳು ಇರುತ್ತವೆ. ಅದನ್ನೇ ದೊಡ್ಡದು ಮಾಡಿ ಬೀದಿಯಲ್ಲಿ ಮಾತನಾಡಬೇಡಿ. ಪಕ್ಷದ ಚೌಕಟ್ಟಿನೊಳಗೆ ಎಲ್ಲದಕ್ಕೂ ಉತ್ತರ ಇರುತ್ತದೆ. ಪಕ್ಷದ ಸಂಘಟನೆಗಾಗಿ ಜಿಲ್ಲೆಯಾದ್ಯಂತ ಪ್ರವಾಸ ಮಾಡುವೆ’ ಎಂದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖಂಡರಾದ ದಾದಾಪೀರ್ ಸಾಬ್, ಸೋಮಿನಕೊಪ್ಪ ಕಾಂತರಾಜ್, ಸತೀಶ್, ರಾಕೇಶ್ ಡಿಸೋಜ, ಗೀತಾ ಸತೀಶ್, ನರಸಿಂಹ ಗಂಧದಮನೆ, ಮಧುಕುಮಾರ್, ಸುರೇಶ್, ಬೂದಿಗೆರೆ ಬಸವರಾಜ್, ಕೃಷ್ಣಪ್ಪ, ಜಂಬರಘಟ್ಟ ನಾಗಪ್ಪ, ತ್ಯಾಗರಾಜ್, ನಿಖಿಲ್, ಶೀಲಾ ನಾಗರಾಜ್, ಆಶಾ ತಿಪ್ಪೇಶ್ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-1816008753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.