ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಮೇ 21ರಂದು ಬೆಳಿಗ್ಗೆ 10ಕ್ಕೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ಖಾಸಗಿ ಕಂಪನಿಯಾದ ಇಸುಝ ಮೋಟರ್ಸ್ ಇಂಡಿಯಾ ಲಿಮಿಟೆಡ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಪಿಯುಸಿ ಕಾಮರ್ಸ್/ ಬಿಕಾಂ, ಐಟಿಐ– ಡಿಸೆಲ್ ಫಿಟ್ಟರ್ಸ್, ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪೂರೈಸಿದ, 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೊನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗಬೇಕು.

ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ: 93806 63606/ 91082 35132 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-42-1359954920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.