ಶಿವಮೊಗ್ಗ: ‘ಆರೋಗ್ಯವಂತ ಪತ್ರಕರ್ತರಿಂದ ಸ್ವಸ್ಥ ಸಮಾಜ ಕಟ್ಟಲು ಸಾಧ್ಯ’ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಕಾರ್ಯದರ್ಶಿ ಸೋಮಶೇಖರ ಕೆರಗೋಡು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ– ಸಾಧಕ ಪತ್ರಕರ್ತರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ‘ಕೆಲಸದ ಒತ್ತಡದಿಂದ ಬಹಳಷ್ಟು ಸಮಯವನ್ನು ಮಕ್ಕಳು, ಕುಟುಂಬದೊಂದಿಗೆ ಕಳೆಯಲು ಸಾಧ್ಯವಾಗುವುದಿಲ್ಲ. ಆ ನೋವು ಪತ್ರಕರ್ತರನ್ನು ಸದಾ ಕಾಡುತ್ತಲೇ ಇರುತ್ತದೆ. ಒತ್ತಡಗಳನ್ನು ಮೆಟ್ಟಿ ನಿಂತು ಸತ್ಯದ ಪರವಾಗಿ ಸದಾ ನಿಲ್ಲಬೇಕು’ ಎಂದರು.

ಪ್ರೆಸ್ ಟ್ರಸ್ಟ್ ಉಪಾಧ್ಯಕ್ಷ ಹೊನ್ನಾಳಿ ಚಂದ್ರಶೇಖರ್ ಮಾತನಾಡಿ, ‘ಪತ್ರಕರ್ತರಿಗೆ ಸಮಯ ಇರಲ್ಲ. ಪತ್ರಿಕೋದ್ಯಮದಲ್ಲಿ ಕೌಶಲ ಇದ್ದವರು ಬೆಳೆಯುತ್ತಾರೆ. ಉನ್ನತ ಸ್ಥಾನಕ್ಕೆ ಹೋಗುತ್ತಾರೆ. ಪತ್ರಿಕೋದ್ಯಮಕ್ಕೆ ಒಳ್ಳೆಯ ಭವಿಷ್ಯವಿದೆ’ ಎಂದರು.

ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್.ರವಿಕುಮಾರ್, ಕ್ರೀಡಾಕೂಟಕ್ಕೆ ಸಹಕರಿಸಿದ ತೀರ್ಪುಗಾರರನ್ನು ಗೌರವಿಸಲಾಯಿತು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಯು.ವೈದ್ಯನಾಥ, ಸನ್ಮಾನ ಸ್ವೀಕರಿಸಿದ ಪತ್ರಕರ್ತ ಶರತ್ಕುಮಾರ್ ಮಾತನಾಡಿದರು. ವಾರ್ತಾ ಇಲಾಖೆಯ ವಾರ್ತಾ ಸಹಾಯಕಿ ಭಾಗ್ಯಾ, ರಾಷ್ಟ್ರೀಯ ಮಂಡಳಿ ಸದಸ್ಯ ಭಂಡಿಗಡಿ ನಂಜುಂಡಪ್ಪ ಹಾಗೂ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-42-149937468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.