ಶಿವಮೊಗ್ಗ: ‘ಇಲ್ಲಿನ ಮಾನಸ ಟ್ರಸ್ಟ್ನ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜು ವತಿಯಿಂದ ಏ. 10 ಮತ್ತು 11ರಂದು ಮಲ್ಲಿಗೇನಹಳ್ಳಿಯ ಜ್ಞಾನಪಥ ಆವರಣದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ’ ಎಂದು ಕಾಲೇಜಿನ ಪ್ರಾಚಾರ್ಯರಾದ ಕೆ. ಸಂಧ್ಯಾ ಕಾವೇರಿ ತಿಳಿಸಿದರು. ‘ಕೃತಕ ಬುದ್ಧಿಮತ್ತೆ, ಅಂತರ್ಶಿಸ್ತೀಯತೆ ಹಾಗೂ ಭವಿಷ್ಯದ ಉನ್ನತ ಶಿಕ್ಷಣ’ ವಿಷಯ ಕುರಿತ ಈ ವಿಚಾರ ಸಂಕಿರಣವನ್ನು ಏ. 10ರಂದು ಬೆಳಿಗ್ಗೆ 10 ಗಂಟೆಗೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಐಐಎಂ ಸಂಸ್ಥೆಯ ಕಮ್ಯುನಿಕೇಷನ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ದೀಪ್ತಿ ದಳಪತಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಏ. 11ರ ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪಲ್ಲಿ ಯು.ಬಿ. ಪವನಜ ಸಮಾರೋಪ ನುಡಿಗಳನ್ನಾಡುವರು. ಮುಖ್ಯ ಅತಿಥಿಯಾಗಿ ಎಚ್.ಎನ್. ಮುರಳೀಧರ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಎರಡು ದಿನದ ಈ ವಿಚಾರ ಸಂಕಿರಣವು ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ರಾಜೇಂದ್ರ ಚೆನ್ನಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಪ್ರೊ. ರಾಜೇಂದ್ರ ಚೆನ್ನಿ, ಡಾ. ಅರ್ಚನಾ ಭಟ್, ಪ್ರೊ. ರಾಮಚಂದ್ರ ಬಾಳಿಗಾ, ಡಾ. ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-42-1469517024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.