ಶಿವಮೊಗ್ಗ: ಇಲ್ಲಿನ ವಿನೋಬ ನಗರದ ಪೊಲೀಸ್ ಚೌಕಿಯ ಬಳಿಯ ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ಭಾನುವಾರ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ನೂತನ ಜನಸಂಪರ್ಕ ಕಚೇರಿಯನ್ನು ಆರ್ಎಸ್ಎಸ್ ಪ್ರಾಂತ್ಯ ಕಾರ್ಯವಾಹ ಪಟ್ಟಾಭಿರಾಮ್ ಉದ್ಘಾಟಿಸಿದರು. ಇದೇ ವೇಳೆ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗ ಪಡೆಯಲು ನೆರವಾಗಲು ‘ಕಾಯಕ ಸೇತು’ ಹೆಸರಿನ ಜಾಬ್ ಪೋರ್ಟಲ್ ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿ ಶುಭಾಶಯ ಕೋರಿದರು.

ಈ ವೇಳೆ ಡಾ.ಧನಂಜಯ ಸರ್ಜಿ ಮಾತನಾಡಿ, ರಾಜ್ಯದಲ್ಲಿ 4,430 ಪದವಿ ಕಾಲೇಜು ಹಾಗೂ 26 ವಿಶ್ವವಿದ್ಯಾಲಯ ಇವೆ. ಪ್ರತಿ ವರ್ಷ 3 ಲಕ್ಷ ವಿದ್ಯಾರ್ಥಿಗಳು ಪದವಿ ಪಡೆಯುತ್ತಾರೆ. ಅವರಲ್ಲಿ ಬಹುತೇಕರು ಉದ್ಯೋಗದ ಭಾಗ್ಯ ಕಾಣದೇ ಪರಿತಪಿಸುತ್ತಾರೆ. ನಿರುದ್ಯೋಗದ ಸಮಸ್ಯೆ ಕರ್ನಾಟಕದ ಯುವಕ-ಯುವತಿಯರಿಗೆ ಅತಿಯಾಗಿ ಬಾಧಿಸುತ್ತಿದೆ. ಕೆಲವರು ತಮ್ಮ ಓದಿಗೆ ಸಂಬಂಧವೇ ಇಲ್ಲದ ಕೆಲಸ ಪಡೆದು ಹೊಟ್ಟೆ ಪಾಡು ಸಾಗಿಸುತ್ತಿದ್ದರೆ, ಇನ್ನು ಕೆಲವರು ಮತ್ತೆ ಊರಿನ ದಾರಿ ಹಿಡಿಯುತ್ತಿದ್ದಾರೆ. ವಿದ್ಯಾರ್ಹತೆಗೆ ತಕ್ಕ ಉದ್ಯೋಗವಿಲ್ಲ ಅವರಿಗೆ ನೆರವಾಗಲು ‘ಕಾಯಕ ಸೇತು’ ಅರಂಭಿಸಿದ್ದೇವೆ ಎಂದರು.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಉಚಿತ ಜಾಬ್ ಪೋರ್ಟಲ್ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಇದನ್ನು ಪದವೀಧರ ಕ್ಷೇತ್ರದ ಉಳಿದೆಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಲಿಂಗಯ್ಯ ಶಾಸ್ತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಮಾಜಿ ಮೇಯರ್ ಸುನೀತಾ ಅಣ್ಣಪ್ಪ, ರುದ್ರಪ್ಪ ಸರ್ಜಿ ನೂತನ ಕಚೇರಿಗೆ ಭೇಟಿ ನೀಡಿ ಶುಭ ಹಾರೈಸಿದರು.

ಕಾಯಕ ಸೇತು ಕೆಲಸ ಹೇಗೆ?

ಪದವೀಧರರು ತಮ್ಮ ರೆಸ್ಯುಮ್ ಅಥವಾ ಸಿ.ವಿಯನ್ನು ‘ಕಾಯಕ ಸೇತು’ ಜಾಬ್ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿದರೆ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಕೊಡಲು ಪ್ರತಿಷ್ಠಿತ ಸಂಸ್ಥೆಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹಿತಿ ರವಾನೆಯಾಗುತ್ತದೆ. ಆಯ್ಕೆಯಾಗದವರಲ್ಲಿ ಯಾವ ಕೌಶಲ್ಯದ ಕೊರತೆ ಇದೆ ಎಂಬುದನ್ನು ಪರಿಶೀಲಿಸಿ ಆ ಕೌಶಲ್ಯಗಳನ್ನೂ ಕಲಿಸುವ ಚಿಂತನೆ ಹೊಂದಿದ್ದೇವೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದರು. ಈ ಜಾಬ್ ಪೋರ್ಟಲ್ನಲ್ಲಿ ಅಭ್ಯರ್ಥಿಗಳು ಪ್ರತಿ 6 ತಿಂಗಳಿಗೊಮ್ಮೆ ತಮ್ಮ ಪ್ರೊಫೈಲ್ ಅಪ್ಡೇಟ್ ಮಾಡಬೇಕು. ಆನ್ ಲೈನ್ ಎಂಟ್ರೆನ್ಸ್ ಟೆಸ್ಟ್ ಮುಖಾಂತರ ಅಭ್ಯರ್ಥಿಯ ಆಯ್ಕೆಗೆ ಅವಕಾಶವಿರುತ್ತದೆ ಎಂದು ಡಾ.ಸರ್ಜಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.