ಕೋಣಂದೂರು: ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರೇಬೈಲಿನ ಪದ್ಮಾವತಿಯವರ ವಾಸದ ಮನೆ ಸೋಮವಾರ ರಾತ್ರಿ ಶಾರ್ಟ್ ಸರ್ಕಿಟ್ನಿಂದ ಬೆಂಕಿಗಾಹುತಿಯಾಗಿದೆ.

ಮನೆಯಲ್ಲಿದ್ದ 15,000 ನಗದು, ಒಡವೆ, ಅಂದಾಜು 50 ಕೆ.ಜಿ.ಯ 3 ಚೀಲ ಅಡಿಕೆ, 10 ಕ್ವಿಂಟಲ್ ಭತ್ತ, ಬೆಲೆಬಾಳುವ ವಸ್ತುಗಳು, ದಾಖಲೆ ಪತ್ರಗಳು ಸೇರಿ ಮನೆಯಲ್ಲಿದ್ದ ಎಲ್ಲವೂ ಸುಟ್ಟಿವೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಿದರು. ಆದರೆ ಯಾವುದೇ ವಸ್ತುಗಳನ್ನು ಉಳಿಸಲು ಸಾಧ್ಯವಾಗಿಲ್ಲ. ಈ ವೇಳೆ ಪದ್ಮಾವತಿ ಅವರು ಪಕ್ಕದ ಮನೆಯಲ್ಲಿದ್ದರು ಎನ್ನಲಾಗಿದೆ.

ಗ್ರಾಮ ಲೆಕ್ಕಾಧಿಕಾರಿ, ಕಂದಾಯ ಅಧಿಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-42-781552953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.