ಶಿವಮೊಗ್ಗ: ‘ರಾಜ್ಯದಲ್ಲಿ ಹೊಸದಾಗಿ ಆರಂಭಿಸಲಾಗುತ್ತಿರುವ 800 ಕೆಪಿಎಸ್ ಶಾಲೆಗಳಿಗೆ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಬಜೆಟ್ನಲ್ಲಿ ಅದಕ್ಕೆ ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಸಂಗೀತ, ಚಿತ್ರಕಲೆ, ದೈಹಿಕ ಶಿಕ್ಷಣ ಶಿಕ್ಷಕರು ಸೇರಿ ವಿಶೇಷ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಹುದ್ದೆಗಳ ಸಂಖ್ಯೆ ಹಾಗೂ ವಿವರವನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದರು.

‘ರಾಜ್ಯದಲ್ಲಿ 1995ರಿಂದ 2005ರವರೆಗಿನ ಅನುದಾನರಹಿತ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಈಚೆಗೆ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಪ್ರಸ್ತಾವ ಸಲ್ಲಿಸಿದ್ದೇವೆ. ಅದಕ್ಕೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಸಚಿವರು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.