ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು ಬಿ.ಇಡಿ ಪರೀಕ್ಷೆಯ ಅಂತಿಮ ರ್ಯಾಂಕ್ ಪಟ್ಟಿ ಪ್ರಕಟಿಸಿದೆ. ಇದರಲ್ಲಿ ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ಜಿ.ಸುಮಾ ಶೇ 94.30 ಅಂಕ ಗಳಿಸುವ ಮೂಲಕ ವಿಶ್ವವಿದ್ಯಾಲಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ.

ಮೊದಲ 10 ರ್ಯಾಂಕ್ಗಳನ್ನು ವಿದ್ಯಾರ್ಥಿನಿಯರೇ ಮುಡಿಗೇರಿಸಿಕೊಂಡಿದ್ದಾರೆ. ಎಲ್ಲ ರ್ಯಾಂಕ್ಗಳೂ ಶಿವಮೊಗ್ಗ ಜಿಲ್ಲೆಯ ಪಾಲಾಗಿವೆ.

ಈ ಬಾರಿ ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಮೊದಲ 10 ರ್ಯಾಂಕ್ಗಳಲ್ಲಿ ಏಳು ಸ್ಥಾನಗಳನ್ನು ಸೂರೆಗೈದಿದ್ದು, ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಇಬ್ಬರು ಹಾಗೂ ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಓರ್ವ ವಿದ್ಯಾರ್ಥಿನಿ ಅಗ್ರ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ವಿಶ್ವವಿದ್ಯಾಲಯವು ಈ ಹಿಂದೆ ಪ್ರಕಟಿಸಿದ್ದ ತಾತ್ಕಾಲಿಕ ರ್ಯಾಂಕ್ ಪಟ್ಟಿಗೆ ಯಾವುದೇ ಆಕ್ಷೇಪಣೆ ಬಾರದ ಹಿನ್ನೆಲೆಯಲ್ಲಿ, ಏಪ್ರಿಲ್ 27ರಂದು ಈ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-42-1468207233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.