ಶಿವಮೊಗ್ಗ: ‘ಕುವೆಂಪು ವಿಶ್ವವಿದ್ಯಾಲಯದ ಮಾನವ ಸಂಪನ್ಮೂಲ ವಿಭಾಗದ ಉಪ ಕುಲಸಚಿವರನ್ನಾಗಿ ಎಂ. ಚಂದ್ರಕಾಂತ್ ಅವರನ್ನು ಮರು ನೇಮಕ ಮಾಡಿರುವ ಕ್ರಮ ಸರಿಯಲ್ಲ’ ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಬಿ. ವರಲಕ್ಷ್ಮಿ ಪ್ರಕಾಶ್ ಹೇಳಿದರು.

‘ಸರ್ಕಾರ ಬೇರೆ ಅಧಿಕಾರಿಯನ್ನು ನೇಮಿಸುವಂತೆ ಆದೇಶಿಸಿದ್ದರೂ ಅದನ್ನು ಲೆಕ್ಕಿಸದೆ ತುರ್ತಾಗಿ ಈ ನೇಮಕ ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಚಂದ್ರಕಾಂತ್ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳಿದ್ದು, ಈ ಕುರಿತು ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಅವರನ್ನು ಮರುನೇಮಕ ಮಾಡಿರುವುದು ಸೂಕ್ತವಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ರೂಪಾ ಸತೀಶ್, ಲಕ್ಷ್ಮಿ, ಮೊಹಮ್ಮದ್ ಅಯೂಬ್ ಖಾನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-42-1050160762

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.