ಶಿವಮೊಗ್ಗ: ‘1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆ– ಕಾಲೇಜುಗಳಿಗೆ ವೇತನಾನುದಾನ ನೀಡುವಂತೆ ಒತ್ತಾಯಿಸಿ ಜೂನ್ 5ರಂದು ಸಚಿವ ಮಧು ಬಂಗಾರಪ್ಪ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು’ ಎಂದು ಕರ್ನಾಟಕ ರಾಜ್ಯ ಅನುದಾನರಹಿತ ಶಾಲೆ– ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಟಿ.ಸಿ. ಶಿವಪ್ಪ ಹೇಳಿದರು.

‘ಸರ್ಕಾರ ಕನ್ನಡ ಉಳಿವಿನ ಬಗ್ಗೆ ಮಾತಾಡುತ್ತಿದೆಯೇ ಹೊರತು ಕನ್ನಡ ಮಾಧ್ಯಮ ಶಾಲೆಗಳ ರಕ್ಷಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಬಜೆಟ್ನಲ್ಲಿ ಅನುದಾನ ನೀಡುವ ಭರವಸೆ ನೀಡಿದ್ದರೂ ಇದುವರೆಗೆ ಜಾರಿಗೆ ತರಲಾಗಿಲ್ಲ. ಸರ್ಕಾರ ಹಾಗೂ ಸಚಿವರು ನಿರಂತರವಾಗಿ ನೆಪ ಹೇಳುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘1995ರಿಂದ 2000ರ ಅವಧಿಯ ಶಾಲೆಗಳಿಗೆ ವೇತನಾನುದಾನ ನೀಡಲು ಅಂದಾಜು ₹ 150 ಕೋಟಿ ವೆಚ್ಚವಾಗಬಹುದು ಎಂದು ಹಿಂದೆಯೇ ಅಂದಾಜಿಸಲಾಗಿತ್ತು. ಆದರೂ ಸರ್ಕಾರ ಅನುಷ್ಠಾನಕ್ಕೆ ಮುಂದಾಗಿಲ್ಲ’ ಎಂದು ದೂರಿದರು.

ಐ.ಎಸ್. ಹೊರಗಿನಮಠ, ಸದಾನಂದ, ಸಂತೋಷ್, ನಂಜುಂಡಸ್ವಾಮಿ, ಧನಂಜಯ್, ಪ್ರದೀಪ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-42-1553726300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.