ಹೊಳೆಹೊನ್ನೂರು: ‘ಎರಡು ದಿನಗಳಲ್ಲಿ 300ಕ್ಕೂ ಹೆಚ್ಚು ವಿದ್ಯುತ್ ಕಂಬಗಳನ್ನು ದುರಸ್ತಿಗೊಳಿಸಿ ಹಳ್ಳಿಗಳಿಗೆ ವಿದ್ಯುತ್ ಕಲ್ಪಿಸುವುದು ಸುಲಭದ ಮಾತಲ್ಲ’ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶ್ ಹೇಳಿದರು.

ಬಿರುಗಾಳಿ, ಮಳೆಯಿಂದ ಹಾನಿಗೊಳಗಾದ ವಿದ್ಯುತ್ ಕಂಬಗಳ ದುರಸ್ತಿ ಮಾಡುತ್ತಿರುವ ಮೆಸ್ಕಾಂ ಸಿಬ್ಬಂದಿಗೆ ಸ್ಥಳೀಯರು ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಅಗರದಹಳ್ಳಿ ಹಾಗೂ ಅರಬಿಳಚಿ ವ್ಯಾಪ್ತಿಯಲ್ಲಿ ಗಾಳಿ– ಮಳೆಗೆ ಸಿಲುಕಿ ವಿದ್ಯುತ್ ಕಂಬಗಳು ಭಾಗಶಃ ಹಾನಿಯಾಗಿದ್ದವು. ಹಾನಿಗೀಡಾದ ಗ್ರಾಮಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮೆಸ್ಕಾಂ ಸಿಬ್ಬಂದಿ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ’ ಎಂದು ತಿಳಿಸಿದರು.

‘ಜಮೀನುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇನ್ನೊಂದು ವಾರವಾದರೂ ಬೇಕಾಗುತ್ತದೆ. ಸದ್ಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ತೆಂಗಿನ ಮರ ಬಿದ್ದು ತುಂಡಾದ ತಂತಿಗಳ ಜೋಡಣೆ ಸೇರಿದಂತೆ ರಸ್ತೆ ಬದಿಯ ಕಾಡು ಜಾತಿಯ ಮರಗಳ ತೆರವು ಮೆಸ್ಕಾಂಗೆ ಸವಾಲಿನ ಕೆಲಸವಾಗಿತ್ತು. ಎಲ್ಲವನ್ನೂ ಸೂಕ್ತವಾಗಿ ನಿಭಾಯಿಸುತ್ತಿರುವುದರಿಂದ ಹಳ್ಳಿಗಳಲ್ಲಿ ವಿದ್ಯುತ್ ಕಂಬ ದುರಸ್ತಿ ಕಾರ್ಯ ಭರದಿಂದ ಸಾಗಿದೆ’ ಎಂದು ಹೇಳಿದರು.

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಪ್ಪ, ಪಂಪಾಪತಿ, ಸಂಜಯ್, ಮಂಜುನಾಥ್, ಪರಸಪ್ಪ, ರಷಿದ್ ಅಹಮದ್, ಶಿವರಾಜ್, ಸದ್ದಾಂ, ಕೃಷ್ಣೋಜಿರಾವ್, ಮಹೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-42-717419029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.