ಶಿವಮೊಗ್ಗ: ಮಾಸಿಕ ಸರಾಸರಿ ₹ 36 ಸಾವಿರ ಕನಿಷ್ಠ ವೇತನ ನಿಗದಿ ಮಾಡುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

‘ರಾಜ್ಯ ಸರ್ಕಾರವು ಕನಿಷ್ಠ ವೇತನ ಪರಿಷ್ಕರಿಸಿ, ಪ್ರತಿ ಉದ್ದಿಮೆಗೆ ಪ್ರತ್ಯೇಕವಾಗಿ ಕನಿಷ್ಠ ವೇತನ ನಿಗದಿ ಮಾಡದೇ ಬಹುತೇಕ ಉದ್ದಿಮೆಗಳಿಗೆ ಏಕರೂಪವಾಗಿ ಹಾಗೂ ಈ ಹಿಂದೆ ಇದ್ದ ನಾಲ್ಕು ವಲಯಕ್ಕೆ ಬದಲಾಗಿ, ಮೂರು ವಲಯಗಳಾಗಿ ಮಾಡಿ, ಮೇ 22 ರಂದು ಹೊರಡಿಸಿರುವ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಸಿಐಟಿಯು ಸ್ವಾಗತಿಸುತ್ತದೆ. ಇದರ ಜೊತೆಗೆ ಅದರಲ್ಲಿರುವ ನ್ಯೂನತೆ ಸರಿಪಡಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ರಾಜ್ಯ ಸರ್ಕಾರ ಪ್ರಕಟಿಸಿರುವ ಕನಿಷ್ಠ ವೇತನದಿಂದ ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ಪ್ರಯೋಜನವಾಗಲಿದೆ. ಆದರೆ ಹೆಚ್ಚಳ ಮಾಡಿರುವ ಕನಿಷ್ಠ ವೇತನವು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾನದಂಡಗಳಿಗೆ ಪೂರಕವಾಗಿಲ್ಲ. ಇವತ್ತಿನ ಬೆಲೆ ಮತ್ತು ಜೀವನ ವೆಚ್ಚಕ್ಕೆ ಅನುಗುಣವಾಗಿ ಸರಾಸರಿ ₹ 36 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು’ ಎಂದು ಒತ್ತಾಯಿಸಿದರು.

‘ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಹಂಗಾಮಿ, ಗುತ್ತಿಗೆ, ನಿಯಮಿತ ಅವಧಿಯ ಕಾರ್ಮಿಕರು ಕಡಿಮೆ ವೇತನಕ್ಕೆ ಯಾವುದೇ ಕಾನೂನುಬದ್ಧ ಸವಲತ್ತುಗಳಿಲ್ಲದೆ ಅಭದ್ರತೆಯಲ್ಲಿ ದುಡಿಯುತ್ತಿದ್ದಾರೆ. ಹೀಗಾಗಿ ಅವರನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳುವಂತೆ’ ಮನವಿಯಲ್ಲಿ ಒತ್ತಾಯಿಸಿದರು.

ಮುಖ್ಯಮಂತ್ರಿಗೆ ಜಿಲ್ಲಾಧಿಕಾರಿ ಕಚೇರಿ ಮೂಲಕ ಮನವಿ ರವಾನಿಸಲಾಯಿತು. ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಬಂಗಾರಪ್ಪ, ಸಂಚಾಲಕ ಎಂ.ನಾರಾಯಣ, ಪ್ರಮುಖರಾದ ಹನುಮಮ್ಮ, ಷಣ್ಮುಖಪ್ಪ, ಕೆ.ಸತ್ಯನಾರಾಯಣರಾವ್ ಮೊದಲಾದವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-42-1238701924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.