ಸೊರಬ: ಅರಣ್ಯ ಒತ್ತುವರಿ ತೆರವಿಗೆ ವಿರೋಧ, ಗ್ರಾಮೀಣ ರಸ್ತೆ ಸಂಪರ್ಕ, ಗೃಹಲಕ್ಷ್ಮಿ ಸೌಲಭ್ಯ, ವಿದ್ಯುತ್ ಸಂಪರ್ಕ, ನಿವೇಶನ ಹಕ್ಕುಪತ್ರ, ಇ– ಸ್ವತ್ತು ಸೇರಿ 120ಕ್ಕೂ ಹೆಚ್ಚಿನ ಅಹವಾಲುಗಳು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಲ್ಲಿಕೆಯಾದವು.

ತಾಲ್ಲೂಕಿನ ಜಡೆ ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿದ ಸಚಿವರು ಅಹವಾಲು ಸ್ವೀಕರಿಸಿ ಮಾತನಾಡಿದರು.

‘ಸೌಲಭ್ಯ ಅರಸಿ ಕಚೇರಿಗೆ ಬರುವ ಗ್ರಾಮೀಣ ಮತ್ತು ಪಟ್ಟಣ ಪ್ರದೇಶದ ನಾಗರಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು’ ಎಂದು ಸೂಚಿಸಿದರು.

‘ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ₹331 ಕೋಟಿ ಮೊತ್ತ ಬಡವರಿಗೆ ಸಂದಾಯವಾಗಿದೆ. ಜನ ವಿಶ್ವಾಸವಿಟ್ಟು ಮತ ನೀಡಿದ್ದರಿಂದ ಶಾಸಕ ಹಾಗೂ ಸಚಿವನಾಗಿದ್ದೇನೆ. ಚುನಾವಣೆಯ ಪೂರ್ವದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅನುಷ್ಠಾನಗೊಳಿಸಿದೆ. ಆರಂಭದಲ್ಲಿ ವಿರೋಧ ಪಕ್ಷದವರು ಅಪಸ್ವರ ಎತ್ತಿದ್ದರು. ಅವರಿಗೆ ಫಲಾನುಭವಿಗಳೇ ಸೂಕ್ತ ಉತ್ತರ ನೀಡಬೇಕಿದೆ. ಗೃಹಲಕ್ಷ್ಮಿ ಯೋಜನೆ ಅನೇಕ ಬಡವರ ಬದುಕಿಗೆ ಆಸರೆಯಾಗಿದೆ. ಜಾತಿ, ಮತ, ಧರ್ಮಗಳ ಆಧಾರದಲ್ಲಿ ಯೋಜನೆಗಳನ್ನು ನೀಡದೇ ಸಮಾಜದ ಪ್ರತಿಯೊಬ್ಬರಿಗೂ ಪ್ರಯೋಜನ ದೊರೆಯುವಂತೆ ಮಾಡಲಾಗಿದೆ’ ಎಂದರು.

ತಹಶೀಲ್ದಾರ್ ಪುರಂದರ್ ಕೆ, ತಾಲ್ಲೂಕು ಪಂಚಾಯಿತಿ ಇಒ ಶಶಿಧರ್, ಸಿಪಿಐ ಮಹಾಂತೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಆರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಪಿ. ರುದ್ರೇಗೌಡ, ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಜಯಶೀಲಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಲಿಂಗೇಗೌಡ, ರವಿ ಪಾಟೀಲ್, ಮಂಜುನಾಥ್ ತಲಗಡ್ಡೆ, ಶಿವಮೂರ್ತಿ, ಬಸವಂತಪ್ಪ ಸೇರಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-42-1380585757

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.