ತೀರ್ಥಹಳ್ಳಿ: ‘ಆರಗದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮ್ಯಾಮೋಗ್ರಫಿ ಘಟಕ ಉದ್ಘಾಟನಾ ಸಮಾರಂಭ ಮೇ 16ರಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ’ ಎಂದು ವೈದ್ಯ ಸುಹಾಸ್ ವಿ. ನಾವಡ ತಿಳಿಸಿದರು.

‘ಗ್ರಾಮೀಣ ಪ್ರದೇಶದ ಜನರಿಗಾಗಿ ವಿಶೇಷ ಕ್ಯಾನ್ಸರ್ ಚಿಕಿತ್ಸೆ ನೀಡುವುದು ನಮ್ಮ ಗುರಿ. ವಿಶ್ವದರ್ಜೆಯ ಕ್ಯಾನ್ಸರ್ ಸ್ಕ್ರೀನಿಂಗ್ ವ್ಯವಸ್ಥೆ ಪರಿಚಯಿಸುತ್ತಿದ್ದು, ಅತ್ಯಂತ ಕಡಿಮೆ ದರದಲ್ಲಿ ಮಹಿಳೆಯರು ಮತ್ತು ಪುರುಷರು ಇದರ ಲಾಭ ಪಡೆಯಬಹುದಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಮಹಿಳೆಯರು ಸ್ತನ, ಗರ್ಭಕಂಠ, ತಲೆ, ಕುತ್ತಿಗೆ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳಲು ಅನುಕೂಲವಾಗುತ್ತದೆ. ಪುರುಷರಿಗೆ ತಲೆ, ಕುತ್ತಿಗೆ, ಪ್ರೊಸ್ಟೇಟ್ ಹಾಗೂ ಕೊಲೋರೆಕ್ಟರ್ ಕ್ಯಾನ್ಸರ್ ತಪಾಸಣೆ ಇದರಿಂದ ಮಾಡಿಸಿಕೊಳ್ಳಬಹುದು. ಇದರಿಂದ ಸುಲಭವಾಗಿ ಕ್ಯಾನ್ಸರ್ ಸಂಬಂಧಿತ ಹುಣ್ಣುಗಳು ಇದ್ದರೆ ಪತ್ತೆ ಹಚ್ಚಬಹುದಾಗಿದೆ’ ಎಂದರು.

‘ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮತ್ತು ಎಂಐಒ ಆಸ್ಪತ್ರೆ ಸಹಯೋಗದಲ್ಲಿ ಗ್ರಾಮೀಣ ಭಾಗದ ಜನರಿಗೆ ಕ್ಯಾನ್ಸರ್ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಥೆಯ ಜೊತೆಗೂಡಿ ಹಲವರಿಗೆ ಉಚಿತ ಕ್ಯಾನ್ಸರ್ ಚಿಕಿತ್ಸೆ ನೀಡಿದ್ದೇವೆ’ ಎಂದು ಟ್ರಸ್ಟಿ ವಿನೂತ್ ಮುರುಳೀಧರ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-42-1090809277

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.