ಶಿವಮೊಗ್ಗ: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೆವಾಲ ಅವರಿಗೆ ದಲಿತ ಸಂಘರ್ಷ ಸಮಿತಿ ಹಾಗೂ ಮಾದಾರ ಮಹಾಸಭಾ ಒತ್ತಾಯಿಸಿವೆ.

‘ಮಾದಿಗ ಸಮುದಾಯವು ಪರಿಶಿಷ್ಟ ಜಾತಿಗಳಲ್ಲಿ ರಾಜ್ಯದ ಅತಿ ದೊಡ್ಡ ಸಮುದಾಯವಾಗಿದೆ. ಅಂದಾಜು 50 ಲಕ್ಷ ಜನಸಂಖ್ಯೆ ಹೊಂದಿದೆ. ಆದರೆ, ಸಮುದಾಯವು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಪರಿಶಿಷ್ಟ ಜಾತಿಗಳಲ್ಲಿಯೇ ಅತ್ಯಂತ ಹಿಂದುಳಿದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬಲವಾಗಿ ಬೆಂಬಲಿಸಿತ್ತು. ಸಮುದಾಯದ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ ಅವರು ರಾಜ್ಯ ರಾಜಕೀಯಕ್ಕೆ ಬಂದಿದ್ದರಿಂದ ಸಮುದಾಯದಲ್ಲಿ ಹೊಸ ವಿಶ್ವಾಸ ಮೂಡಿತು. ಇದರಿಂದ ಸಮುದಾಯದವರು ಕಾಂಗ್ರೆಸ್ ಪಕ್ಷದ ಪರ ನಿಂತರು’ ಎಂದು ಡಿಎಸ್ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕೆ.ಎಚ್.ಮುನಿಯಪ್ಪ ಅಂದಾಜು ಐದು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಇದ್ದಾರೆ. ಏಳು ಬಾರಿ ಲೋಕಸಭಾ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಜೊತೆಗೆ 10 ವರ್ಷ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರನ್ನು ಡಿಸಿಎಂ ಮಾಡಿದಲ್ಲಿ ಎಡಗೈ ಮಾದಿಗ ಸಮುದಾಯಕ್ಕೂ ನ್ಯಾಯಯುತ ಪ್ರಾತಿನಿಧ್ಯ ದೊರೆಯಲಿದೆ’ ಎಂದರು.

ಪ್ರಮುಖರಾದ ಶಿವಲಿಂಗಪ್ಪ, ಅಣ್ಣಪ್ಪ, ಶಿವಾಜಿ, ತೇಜಕುಮಾರ್, ನೀಲಪ್ಪ ರಾಮನಗರ, ಬೊಮ್ಮನಕಟ್ಟೆ ಕೃಷ್ಣ, ಅತ್ತಿಗುಂದ ಕರಿಯಪ್ಪ, ಬಸವರಾಜ ಮಾರಳ್ಳಿ, ಜಗದೀಶ್ ಪುರಲೆ, ಅಣ್ಣಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-42-212944338

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.