ಶಿವಮೊಗ್ಗ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷ ಡಿಸೆಂಬರ್ 3ರಂದು ಆಯೋಜಿಸುವ ವಿಶ್ವ ಅಂಗವಿಕಲರ ದಿನಾಚರಣೆ ವೇಳೆ ನೀಡುವ ರಾಷ್ಟ್ರೀಯ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಂಗವಿಕಲರ ವಿವಿಧ ಕ್ಷೇತ್ರಗಳ ಸಾಧನೆಗಳನ್ನು (ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವೀನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳು) ಗುರುತಿಸಿ ಗೌರವಿಸಲು ಈ ಪ್ರಶಸ್ತಿಗಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.

ಪ್ರಶಸ್ತಿಗಾಗಿ ನಾಮನಿರ್ದೇಶನ ಹಾಗೂ ಅರ್ಜಿಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಮೂಲಕ ಕಡ್ಡಾಯವಾಗಿ ಆನ್ಲೈನ್ನಲ್ಲಿ ಮಾತ್ರ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ www.depwd.gov.in ಹಾಗೂ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.inಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-42-397792130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.