ಶಿವಮೊಗ್ಗ: ಜಿಲ್ಲೆಯಾದ್ಯಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಶನಿವಾರದಿಂದ ಆರಂಭಗೊಂಡಿದ್ದು, ಮೊದಲ ದಿನ ಕನ್ನಡ ವಿಷಯದ ಪರೀಕ್ಷೆ ಯಾವುದೇ ಅಡಚಣೆಗಳಿಲ್ಲದೆ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯಿತು.

ಜಿಲ್ಲೆಯಲ್ಲಿ ಒಟ್ಟು 41 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಮಾತೃಭಾಷೆ ಕನ್ನಡ ವಿಷಯಕ್ಕೆ 15,309 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅವರಲ್ಲಿ 15,063 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. 246 ಮಂದಿ ವಿವಿಧ ಕಾರಣಗಳಿಂದ ಗೈರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಮೊದಲ ಪರೀಕ್ಷೆಯಾಗಿರುವುದರಿಂದ ಬಹಳಷ್ಟು ಪಾಲಕರು ತಮ್ಮ ಮಕ್ಕಳನ್ನು ವಾಹನಗಳಲ್ಲಿ ಪರೀಕ್ಷಾ ಕೇಂದ್ರಗಳವರೆಗೆ ಕರೆತಂದು ಬಿಟ್ಟರು. ಬೆಳಿಗ್ಗೆಯೇ ವಿದ್ಯಾರ್ಥಿಗಳು ಕೇಂದ್ರಗಳ ಮುಂಭಾಗದಲ್ಲಿ ಅಂಟಿಸಿದ್ದ ಕೊಠಡಿ ಸಂಖ್ಯೆಗಳ ಪಟ್ಟಿಯನ್ನು ಪರಿಶೀಲಿಸಿ ತಮ್ಮ ತಮ್ಮ ಕೊಠಡಿಗಳತ್ತ ತೆರಳಿದರು. ಪರೀಕ್ಷೆ ಮುಗಿದ ನಂತರ ಪಾಲಕರು ಮತ್ತೆ ಕೇಂದ್ರಗಳಿಗೆ ತೆರಳಿ ಮಕ್ಕಳನ್ನು ಮನೆಗೆ ಕರೆದೊಯ್ದ ದೃಶ್ಯ ಸಾಮಾನ್ಯವಾಗಿತ್ತು.

ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ನಡೆಯಲು ಜಿಲ್ಲಾಡಳಿತವು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಎಲ್ಲ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿ ನಿಗಾ ವಹಿಸಲಾಗಿತ್ತು. ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ತಲುಪಿಸಲು ತಲಾ ಮೂವರು ಅಧಿಕಾರಿಗಳನ್ನೊಳಗೊಂಡ 12 ತಂಡಗಳನ್ನು ರಚಿಸಲಾಗಿತ್ತು. ಪ್ರಶ್ನೆಪತ್ರಿಕೆ ಸಾಗಾಟದ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಪರೀಕ್ಷಾ ದಿನಗಳಲ್ಲಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಅನಗತ್ಯ ಗುಂಪುಗೂಡಿಕೆಯನ್ನು ತಡೆಯಲಾಯಿತು. ಗ್ರಾಮೀಣ ಭಾಗದ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.