ಶಿವಮೊಗ್ಗ: ನೀಟ್– ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಮರು ಪರೀಕ್ಷೆಯ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ಎನ್.ಎಸ್.ಯು.ಐ ಸಂಘಟನೆಯಿಂದ ನಗರದ ಮಹಾವೀರ ವೃತ್ತದಲ್ಲಿ ಗುರುವಾರ ರಸ್ತೆ ತಡೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

‘ಕೇಂದ್ರ ಸರ್ಕಾರ ಪರೀಕ್ಷೆಯ ಪಾರದರ್ಶಕತೆ ಕಾಪಾಡುವಲ್ಲಿ ವಿಫಲವಾಗಿದೆ. ಪ್ರಶ್ನೆ ಪತ್ರಿಕೆ ಪದೇ ಪದೇ ಸೋರಿಕೆ ಆಗುತ್ತಿದೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ವಿಶ್ವಾಸ ಕಳೆದುಕೊಳ್ಳುವಂತಾಗಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಈಗ ದೇಶದಾದ್ಯಂತ ಪರೀಕ್ಷೆಯನ್ನು ರದ್ದು ಮಾಡಿ ಕೇಂದ್ರ ಸರ್ಕಾರ ಮರು ಪರೀಕ್ಷೆಗೆ ಆದೇಶಿಸಿದೆ. ಇದು ಗ್ರಾಮೀಣರು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಮೇಲೆ ಪ್ರಹಾರ ಮಾಡಿದಂತಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಕಂಡಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ, ಪೋಷಕರ ನಂಬಿಕೆ ಮತ್ತು ವಿಶ್ವಾಸವನ್ನೇ ಇದು ಹಾಳು ಮಾಡಿದೆ’ ಎಂದರು.

‘ರಾಜಸ್ಥಾನದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಮೂಲಕವೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಅದು ಶೋಚನಿಯ ಸಂಗತಿ. ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಕೋಚಿಂಗ್ ಮಾಫಿಯಾ, ಹಣದ ಪ್ರಭಾವ ಕೆಲಸ ಮಾಡಿದೆ. ಇದರಿಂದ ಪರೀಕ್ಷೆ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘2024ರಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಮಾತು ದೇಶದಾದ್ಯಂತ ಕೇಳಿಬಂದಿತ್ತು. ಅದನ್ನು ಗಂಭೀರವಾಗಿ ಪರಿಗಣಿಸದ ಕೇಂದ್ರ ಸರ್ಕಾರ ಮುಚ್ಚಿಹಾಕಿತ್ತು. ಹೀಗಾಗಿ ವಿದ್ಯಾರ್ಥಿಗಳಲ್ಲಿ ಈವರೆಗೂ ಪರೀಕ್ಷೆಯ ಬಗ್ಗೆ ಸಂಪೂರ್ಣ ವಿಶ್ವಾಸ ಮರುಸ್ಥಾಪನೆಯಾಗಿಲ್ಲ’ ಎಂದು ಹೇಳಿದ ಪ್ರತಿಭಟನಕಾರರು, 2026ನೇ ಸಾಲಿನ ಪ್ರಶ್ನೆಪತ್ರಿಕೆ ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಎನ್ಎಸ್ಯುಐ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರ ಘಟಕದ ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಚಂದ್ರೋಜಿ ರಾವ್, ಆದಿತ್ಯ, ಸುಭಾನ್, ವರುಣ್, ಅಭಿಷೇಕ್, ಯೂಸುಫ್, ಆಕಾಶ್, ಹಾಲಸ್ವಾಮಿ, ಶಂಕರ್, ಶ್ರೀಕಾಂತ್, ಸೃಜನ್, ಲೋಹಿತ್ ಮತ್ತಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-42-1171226416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.