ಶಿವಮೊಗ್ಗ: ನೀಟ್– ಯುಜಿ.ಯಲ್ಲಿ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ವಿನೋಬನಗರದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ದಾರಿ ಮಧ್ಯೆಯೇ ಪ್ರತಿಭಟನಕಾರರನ್ನು ತಡೆದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದು ಕರೆದೊಯ್ದರು. ಇದರಿಂದ ಸ್ಥಳದಲ್ಲಿ ಕೆಲಕಾಲ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು.

ಪ್ರಶ್ನೆಪತ್ರಿಕೆ ಬಹಿರಂಗ ಹಾಗೂ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್– ಯುಜಿ 2026ನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿದೆ. ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದೆ. ಇದು ತೀವ್ರ ಕಳವಳಕಾರಿ ಸಂಗತಿ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿದೆ. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹಾಗಿದ್ದರೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದ ವಿರುದ್ಧ ಧ್ವನಿ ಎತ್ತುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಜೀವನ ಶೈಲಿಯ ಪಾಠ ಮಾಡುವ ಮೊದಲು, ಕನಿಷ್ಠ ಒಂದು ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಆಗದಂತೆ ನಡೆಸುವ ಪ್ರಾಥಮಿಕ ಜವಾಬ್ದಾರಿ ತೋರಲಿ’ ಎಂದು ಪ್ರತಿಭಟನಕಾರರು ಛೇಡಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ, ‘ರಾಜ್ಯದಲ್ಲಿ ಸಣ್ಣಪುಟ್ಟ ವಿಚಾರಗಳಿಗೂ ರಾಷ್ಟ್ರೀಯ ಹಿತಾಸಕ್ತಿಯ ಬಗ್ಗೆ ಭಾಷಣ ಮಾಡುವ ಸ್ಥಳೀಯ ಬಿಜೆಪಿ ನಾಯಕರು, ಕೇಂದ್ರದ ಈ ಬೃಹತ್ ವೈಫಲ್ಯದ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ? ಪ್ರಶ್ನೆಪತ್ರಿಕೆ ಸೋರಿಕೆಯಂತಹ ಹಗರಣಗಳು ಪದೇ ಪದೇ ನಡೆಯುತ್ತಿದ್ದರೂ, ಕೇಂದ್ರದ ಮೇಲೆ ಒತ್ತಡ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಇದು ಕೇವಲ ಒಂದು ಪರೀಕ್ಷೆಯ ವಿಚಾರವಲ್ಲ, ಬದಲಾಗಿ ರಾಜ್ಯದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ’ ಎಂದು ಹೇಳಿದರು.

‘2024ರಲ್ಲೂ ಪ್ರಶ್ನೆಪತ್ರಿಕೆ ಬಹಿರಂಗಗೊಂಡಿದೆ. ಆಗ ಕೇಂದ್ರ ಸರ್ಕಾರ ಅದನ್ನು ಮುಚ್ಚಿ ಹಾಕಿತ್ತು. ಆಗಿನಿಂದಲೂ ನೀಟ್ ವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ವಿಶ್ವಾಸ ಮರುಸ್ಥಾಪನೆ ಆಗಿಲ್ಲ. ರಾಷ್ಟ್ರಮಟ್ಟದ ಪರೀಕ್ಷೆಯ ವಿಶ್ವಾಸಾರ್ಹತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಕೂಡಲೇ ಕೇಂದ್ರ ಸರ್ಕಾರವನ್ನು ವಜಾಗೊಳಿಸಿ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಬೇಕು’ ಎಂದು ಯುವ ಕಾಂಗ್ರೆಸ್ ಜಿಲ್ಲಾ ಘಟಕ ರಾಷ್ಟ್ರಪತಿಗೆ ಒತ್ತಾಯಿಸಿತು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರ್ಷಿತ್ ಗೌಡ, ಯುವ ಮುಖಂಡ ಮಧುಸೂದನ್, ಪಾಲಿಕೆ ಮಾಜಿ ಸದಸ್ಯೆ ಯಮುನಾ ರಂಗೇಗೌಡ, ಪ್ರಮುಖರಾದ ಚರಣ್, ಪ್ರವೀಣ್, ಅಬ್ದುಲ್ ಸತ್ತಾರ್, ಮಲವಗೊಪ್ಪ ಶಿವು, ಆಕಾಶ್, ಗಿರೀಶ್, ಸಕ್ಲೇನ್, ಅಶೋಕ್, ರವಿ, ವಿಷ್ಣು, ಬಾಬು, ತೌಫಿಕ್, ಮನೋಜ್, ಅನಂತ್ ಮತ್ತಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-42-1601810752

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.