ಶಿವಮೊಗ್ಗ: ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಕೇಂದ್ರವು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಕಳುಹಿಸಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.

ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಇತ್ತೀಚೆಗೆ ಸುದ್ದಿಗಳು ಹರಿದಾಡುತ್ತಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

‘ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಕೇಂದ್ರ ಸರ್ಕಾರದ ಅಧೀನದ ಎನ್.ಟಿ.ಪಿ.ಸಿ ಸಂಸ್ಥೆ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಿದೆ. ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನ ಮತ್ತು ಭೂ-ವೈಜ್ಞಾನಿಕ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ವಿಷಯ ಗೊತ್ತಾದ ತಕ್ಷಣ ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿದಾಗ, ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕೃತ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ’ ಎಂದಿದ್ದಾರೆ.

‘ಶರಾವತಿ ಸಂತ್ರಸ್ತರಿಗೆ ಇನ್ನೂ ಸಮರ್ಪಕ ಭೂ–ಪರಿಹಾರ ದೊರಕಿಲ್ಲ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಪರಿಸರ ಪ್ರೇಮಿಗಳು ಹಾಗೂ ಬುದ್ಧಿಜೀವಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಯೋಜನೆ ಜಾರಿಯಾಗದಂತೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗುವುದು’ ಎಂದು ಸಂಸದರು ಭರವಸೆ ನೀಡಿದ್ದಾರೆ.

‘ಪರಿಸರಕ್ಕೆ ಹಾನಿಯಾಗುವ ಯಾವುದೇ ಯೋಜನೆಗೂ ನಮ್ಮ ವಿರೋಧವಿದ್ದು, ಜನರ ಹಿತಾಸಕ್ತಿಯನ್ನು ಕಾಪಾಡಲು ಬದ್ಧನಾಗಿದ್ದೇನೆ’ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-42-2052705874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.