ಸಾಗರ: ‘ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣ ವಿರೋಧಿಸಿ ನಿರಂತರವಾಗಿ ಜನಜಾಗೃತಿ ಹಾಗೂ ಜನಾಂದೋಲನ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಮಲೆನಾಡು ಅಣು ಸ್ಥಾವರ ವಿರೋಧಿ ಹೋರಾಟ ವೇದಿಕೆ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದ್ದಾರೆ.

ಜನಜಾಗೃತಿ ಅಭಿಯಾನದ ಅಂಗವಾಗಿ ಶುಕ್ರವಾರ ಪೋಸ್ಟರ್, ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಮಲೆನಾಡಿಗೆ ಮಾರಕವಾಗಿರುವ ಅಣು ಸ್ಥಾವರ ಯೋಜನೆ ವಿರೋಧಿಸಿ ಮೇ 18ರಂದು ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿಭಟನೆ, 20ಕ್ಕೆ ಬೇಸೂರು ಗ್ರಾಮದ ಬಸವಣ್ಣ ದೇವಸ್ಥಾನದಿಂದ ಸಾಗರದವರೆಗೆ ಪಾದಯಾತ್ರೆ, 21ರಿಂದ 26ರವರೆಗೆ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಮೇ 27ಕ್ಕೆ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆಯೋಜಿಸಲಾಗಿದೆ. ನಂತರವೂ ಸ್ಥಾವರ ಸ್ಥಾಪನೆ ರದ್ದತಿ ಕುರಿತು ಸರ್ಕಾರದಿಂದ ಅಧಿಕೃತ ಘೋಷಣೆ ಬಾರದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು’ ಎಂದು ಹೇಳಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸ್ಥಾವರ ಸ್ಥಾಪನೆ ವಿರೋಧಿಸಿ ಹೇಳಿಕೆ ನೀಡಿರುವುದು ಸ್ವಾಗತಾರ್ಹ. ಸಂಸದ ಬಿ.ವೈ.ರಾಘವೇಂದ್ರ ಕೂಡ ಇದೇ ನಿಲುವು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕೇಂದ್ರ ಸಚಿವರನ್ನು ನಿಯೋಗದೊಂದಿಗೆ ಭೇಟಿ ಮಾಡುವುದಾಗಿ ಅವರು ತಿಳಿಸಿದ್ದು, ಶೀಘ್ರವಾಗಿ ದಿನಾಂಕ ನಿಗದಿ ಮಾಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ತಿಳಿಸಿದರು.

ತೀ.ನ.ಶ್ರೀನಿವಾಸ್, ಶಿವಾನಂದ ಗೌಡ, ಅರವಿಂದ್ ಪಾಟೀಲ್, ಕುರುವರಿ ಸೀತಾರಾಮ್, ನಾಗೇಂದ್ರ ಸಾಗರ್, ಭಾಸ್ಕರ್, ನಾಗರಾಜ್, ರೋಹಿತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-42-596330682

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.