ಸಾಗರ: ‘ತಾಲ್ಲೂಕಿನ ಬೇಸೂರು ಗ್ರಾಮದ ಬಳಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ನಿರ್ಮಾಣ ಯೋಜನೆ ಪ್ರಸ್ತಾಪ ವಿರೋಧಿಸಿ ಮೇ 27ರಂದು ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದ್ದಾರೆ.

ಬೇಸೂರು ಗ್ರಾಮದಲ್ಲಿ ಮಂಗಳವಾರ ನಡೆದ ಗ್ರಾಮಸ್ಥರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

‘ಯೋಜನೆ ವಿರೋಧಿಸಿ ಮೇ 7ರಂದು ಸಾಗರದಲ್ಲಿ ನಡೆದ ಪಕ್ಷಾತೀತ ಪ್ರತಿಭಟನೆಗೆ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹೋರಾಟವನ್ನು ಈಗ ವಿಸ್ತರಿಸುವ ದೃಷ್ಟಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಹೇಳಿದರು.

‘ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಪ್ರಸ್ತಾವವನ್ನು ಕೈ ಬಿಡಲಾಗಿದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸುವವರೆಗೂ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಮಲೆನಾಡು ಭಾಗಕ್ಕೆ ಈ ಯೋಜನೆ ಬರಲು ಬಿಡುವುದಿಲ್ಲ’ ಎಂದು ತಿಳಿಸಿದರು.

‘ಅಣು ಸ್ಥಾವರ ಸ್ಥಾಪನೆಯಾದರೆ ಮಲೆನಾಡಿನ ಜನರ ಜನಜೀವನಕ್ಕೆ ಯಾವ ರೀತಿ ತೊಂದರೆಯಾಗುತ್ತದೆ ಎಂಬುದನ್ನು ಮನದಟ್ಟು ಮಾಡಲು ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ವಿವಿಧ ಸ್ವರೂಪದ ಹೋರಾಟಗಳನ್ನು ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಮುಖರಾದ ಕುರುವರಿ ಸೀತಾರಾಮ್, ನವೀನ್ ಕೆ.ವಿ, ತೀ.ನ.ಶ್ರೀನಿವಾಸ್, ಕುಂಟಗೋಡು ಸೀತಾರಾಮ್, ಕೆ.ಎಸ್.ಪ್ರಶಾಂತ್, ಅರುಣ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-42-1536164025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.