ಸಾಗರ: ‘ಅಪ್ಪಟ ಮಲೆನಾಡು ಪ್ರದೇಶವಾದ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಪ್ರಸ್ತಾವಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಸಂದರ್ಭ ಬಂದರೆ ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ನಿಲ್ಲಲೂ ಹಿಂಜರಿಯಲಾರೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಅಣು ಸ್ಥಾವರ ಸ್ಥಾಪನೆ ವಿರೋಧಿಸಿ ಗ್ರಾಮಸ್ಥರು ನೀಡಿದ ಮನವಿ ಸ್ವೀಕರಿಸಿ ಮಾತನಾಡಿದರು.

‘ಜಲವಿದ್ಯುತ್ ಯೋಜನೆಗಾಗಿ ಈ ಭಾಗದ ಜನ ಎರಡು ಬಾರಿ ಮುಳುಗಡೆ ಸಂತ್ರಸ್ತರಾಗಿದ್ದಾರೆ. ಹೀಗೆ ತೊಂದರೆಗೆ ಒಳಗಾದವರಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ನ್ಯಾಯ ದೊರಕಿಲ್ಲ. ಇಂತಹ ಸನ್ನಿವೇಶದಲ್ಲಿ ಮತ್ತೊಂದು ಬೃಹತ್ ಯೋಜನೆ ಈ ಭಾಗಕ್ಕೆ ಬರಲು ಬಿಡುವುದಿಲ್ಲ’ ಎಂದು ತಿಳಿಸಿದರು.

‘ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೃಷ್ಣ ಬೈರೇಗೌಡ, ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿ ಬೇಸೂರಿನಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಭೂಮಿ ನೀಡಬಾರದು ಎಂದು ಮನವಿ ಸಲ್ಲಿಸಿದ್ದೇನೆ. ಸಂಸದ ಬಿ.ವೈ.ರಾಘವೇಂದ್ರ ಅವರು ಈ ಸಂಬಂಧ ಕೇಂದ್ರ ಸರ್ಕಾರದ ಪ್ರಮುಖರನ್ನು ಭೇಟಿಯಾಗಿ ಇಲ್ಲಿನ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು’ ಎಂದರು.

‘ಶರಾವತಿ ಹಿನ್ನೀರಿನ ಪ್ರದೇಶದಿಂದ ಸುತ್ತುವರೆದಿರುವ ಬೇಸೂರು ಗ್ರಾಮದಲ್ಲಿ ಅಣು ಸ್ಥಾವರ ಸ್ಥಾಪನೆಯಾದರೆ ಜೀವವೈವಿಧ್ಯ ಹಾಗೂ ವನ್ಯಜೀವಿಗಳಿಗೂ ಕಂಟಕ ಎದುರಾಗಲಿದೆ. ಇಂತಹ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ವಿದ್ಯುತ್ ಸ್ಥಾವರ ಬರಲು ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಸ್ಥಳೀಯ ಅಧಿಕಾರಿಗಳು ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಬೇಸೂರು ಗ್ರಾಮ ಸೂಕ್ತ ಸ್ಥಳವಲ್ಲ ಎಂದು ಈಗಾಗಲೇ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.

ತಹಶೀಲ್ದಾರ್ ಪ್ರದೀಪ್, ತಾಲ್ಲೂಕು ಪಂಚಾಯಿತಿ ಇಒ ಶಿವಪ್ರಕಾಶ್, ಬಿ.ಎ. ಇಂದೂಧರ ಬೇಸೂರು, ನವೀನ್ ಗಿಣಿವಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-42-1763513002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.