ಶಿವಮೊಗ್ಗ: ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವ ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಒತ್ತಾಯಿಸುವ ಬಗ್ಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಎರಡೂ ವಿಚಾರಗಳ ಬಗ್ಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನಿರ್ಣಯ ಮಂಡಿಸಿದರು. ಅದಕ್ಕೆ ಸಭೆ ಬಹುಮತದಿಂದ ಅನುಮೋದನೆ ನೀಡಿ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲು ನಿರ್ಧರಿಸಿತು.

ನಿರ್ಣಯ ಮಂಡಿಸಿದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ‘ಮಲೆನಾಡಿನ ಜನರು ಈಗಾಗಲೇ ಜಲಾಶಯಗಳ ನಿರ್ಮಾಣದಿಂದ ನಿರಾಶ್ರಿತರಾಗಿದ್ದಾರೆ. ಈಗ ಸಾಗರ ತಾಲ್ಲೂಕು ಬೇಸೂರಿನಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದು ಅವರಲ್ಲಿ ಭಯ ಸೃಷ್ಟಿಸಿದೆ. ಆದರೆ ಯಾವುದೇ ಕಾರಣಕ್ಕೂ ಅಣು ಸ್ಥಾವರ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ’ ಎಂದರು.

‘ಜಿಲ್ಲೆಗೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ 90 ಸಾವಿರ ಪ್ರಕರಣ ಬಾಕಿ ಇವೆ. ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಿಂದ ಮಧ್ಯ ಕರ್ನಾಟಕ ಭಾಗಕ್ಕೆ ಅನುಕೂಲವಾಗಲಿದ್ದು, ಜಿಲ್ಲೆಯ ವಕೀಲರು ಕೈಗೊಂಡಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುತ್ತದೆ. ಪೀಠ ಸ್ಥಾಪನೆಗೆ ಸರ್ವಾನುಮತದಿಂದ ಒತ್ತಾಯಿಸುತ್ತೇವೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಅಡಿಕೆ ಮರ ಉರುಳಿ ಆಗಿರುವ ಹಾನಿಯ ಬಗ್ಗೆ ಸಿಎಂ ಗಮನ ಸೆಳೆದು ವಿಶೇಷ ಪರಿಹಾರ ಪ್ಯಾಕೇಜ್ಗೆ ಮನವಿ ಸಲ್ಲಿಸಿದ್ದೇವೆ. ಈ ವಿಚಾರದಲ್ಲಿ ರಾಜ್ಯದ ಜೊತೆಗೆ ಕೇಂದ್ರವೂ ನೆರವಿಗೆ ಬಂದು ಪರಿಹಾರ ಪ್ಯಾಕೇಜ್ ನೀಡಲು ಒತ್ತಾಯಿಸೋಣ’ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಸಭೆಯಲ್ಲಿ ಶಾಸಕರಾದ ಬಿ.ಕೆ.ಸಂಗಮೇಶ್ವರ, ಎಸ್.ಎನ್.ಚನ್ನಬಸಪ್ಪ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಇಒ ಎನ್.ಹೇಮಂತ್, ಎಸ್ಪಿ ಬಿ.ನಿಖಿಲ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-1184896172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.