ಸಾಗರ: ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಕೋರಿ ಶಾಸಕ ಗೋಪಾಲಕೃಷ್ಣ ಬೇಳೂರು ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮಲೆನಾಡಿನ ಜನರು ಈಗಾಗಲೇ ಎರಡು ಬಾರಿ ಜಲ ವಿದ್ಯುತ್ ಯೋಜನೆಗಾಗಿ ತಮ್ಮ ಭೂಮಿಯನ್ನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಪ್ರಸ್ತಾಪದ ವಿಷಯ ಕೇಳಿ ಈ ಭಾಗದ ಜನರು ಆತಂಕಗೊಂಡಿದ್ದು ಯಾವುದೇ ಕಾರಣಕ್ಕೂ ಸ್ಥಾವರ ಆರಂಭಕ್ಕೆ ಭೂ ಪ್ರದೇಶವನ್ನು ನೀಡಬಾರದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬೇಸೂರು ಗ್ರಾಮ ವನ್ಯಜೀವಿ ವಲಯ ಎಂದು ಘೋಷಣೆಯಾಗಿರುವ ಪ್ರದೇಶವಾಗಿದೆ. ಅಣು ಸ್ಥಾವರ ಸ್ಥಾಪನೆಯಾದರೆ ಜೀವವೈವಿಧ್ಯ, ವನ್ಯಜೀವಿಗಳಿಗೆ ತೊಂದರೆಯಾಗಲಿದೆ. ಇದೊಂದು ಜನವಸತಿ ಪ್ರದೇಶವೂ ಆಗಿದ್ದು ಭೂ ಮಂಜೂರಾತಿಗೆ ಅರ್ಜಿ ಸಲ್ಲಿಸಿರುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೂ ಮನವಿ ಸಲ್ಲಿಸಿದ್ದು ಜನರ ವಿರೋಧದ ನಡುವೆ ಸ್ಥಾವರ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ ಎಂಬ ಭರವಸೆ ಸರ್ಕಾರದಿಂದ ದೊರಕಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-42-1274006468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.