ಶಿವಮೊಗ್ಗ: ಕೇಂದ್ರ ಸರ್ಕಾರದ ‘ಜ್ಞಾನ ಭಾರತಂ ಮಿಷನ್’ ಯೋಜನೆಯಡಿ ರಾಷ್ಟ್ರದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಇಂದಿನ ತಂತ್ರಜ್ಞಾನದ ಮೂಲಕ ಸಂರಕ್ಷಣೆ ಹಾಗೂ ಡಿಜಿಟಲೀಕರಣ ಮಾಡುವ ಯೋಜನೆ ಹಮ್ಮಿಕೊಂಡಿದೆ. ಅದರ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಳೆಗರಿ ಹಸ್ತಪ್ರತಿಗಳ ಗಣತಿ ಮತ್ತು ಸಮೀಕ್ಷೆ ಕಾರ್ಯವು ಪ್ರಸ್ತುತ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಪ್ರತಿಬಿಂಬಿಸುವ ಹಸ್ತಪ್ರತಿಗಳ ಸಮೀಕ್ಷೆ ಮಾಡಿ, ಡಿಜಿಟಲೀಕರಣದ ಮೂಲಕ ಭವಿಷ್ಯದ ಪೀಳಿಗೆಗಾಗಿ ಶಾಶ್ವತವಾಗಿ ಉಳಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ.

ಸಂಗ್ರಹಿಸಲಾದ ಹಸ್ತಪ್ರತಿಗಳ ಮಾಹಿತಿಯನ್ನು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಮೊಬೈಲ್ ಅಪ್ಲಿಕೇಶನ್ ಮೂಲಕ ಹಸ್ತಪ್ರತಿಗಳ ರಾಷ್ಟ್ರೀಯ ಭಂಡಾರಕ್ಕೆ (ನ್ಯಾಷನಲ್ ರೆಸ್ಪಾನ್ಸಿಬಿಲಿಟಿ) ಅಪ್ಲೋಡ್ ಮಾಡಲಾಗುತ್ತದೆ. ಇದರಿಂದ ಜಗತ್ತಿನಾದ್ಯಂತ ಈ ಜ್ಞಾನ ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು, ಸಂಘ– ಸಂಸ್ಥೆಗಳು, ಮಠ– ಮಂದಿರಗಳು ಮತ್ತು ದೇವಾಲಯಗಳಲ್ಲಿ ಹಸ್ತಪ್ರತಿಗಳು ಲಭ್ಯವಿದ್ದಲ್ಲಿ ಅವುಗಳ ಮಾಹಿತಿ ನೀಡಿ ಸಹಕರಿಸಲು ಕೋರಲಾಗಿದೆ.

ಹಸ್ತಪ್ರತಿಗಳ ಬಗ್ಗೆ ಮಾಹಿತಿ ನೀಡಲು ಇಚ್ಚಿಸುವವರು ಸಮನ್ವಯಾಧಿಕಾರಿ ವಿದ್ವಾನ್ ಮಂಜುನಾಥ್ (ಮೊ.ಸಂ. 97432 50050) ಹಾಗೂ ರಾಜ್ಯ ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕ ಎಚ್.ಸಿ.ಕುಮಾರ್ (ಮೊ.ಸಂ. 81050 13149) ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರವಾಸೋದ್ಯಮ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-42-305523300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.