ಸಾಗರ: 34 ವರ್ಷಗಳ ನಂತರ ಶಿವಮೊಗ್ಗದ ಅಲ್ಲಮಪ್ರಭು ಬಯಲಿನ ಮಾನವಧರ್ಮ ಮಂಟಪದಲ್ಲಿ ಮೇ 17ರಂದು ಸಂಜೆ 6ಕ್ಕೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಮಹೋತ್ಸವ ಸಮಿತಿ ಉಪಾಧ್ಯಕ್ಷ ರುದ್ರಮುನಿ ಸಜ್ಜನ್ ತಿಳಿಸಿದರು.

ಸಾರ್ವಜನಿಕ ಜೀವನದಲ್ಲಿ 50 ವರ್ಷಗಳನ್ನು ಪೂರೈಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮವೂ ನಡೆಯಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬಾಳೆಹೊನ್ನೂರು ಪೀಠ, ಉಜ್ಜಿನಿ ಪೀಠ, ಕೇದಾರ ಪೀಠ, ಶ್ರೀಶೈಲ ಪೀಠ, ಕಾಶಿ ಪೀಠದ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಅಂದಾಜು 50,000 ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ಪ್ರಮುಖರಾದ ಮಲ್ಲಿಕಾರ್ಜುನ, ಕೆ.ವಿ.ಪ್ರವೀಣ್, ವೀರಭದ್ರ ಜಂಬಿಗೆ, ನಂದೀಶ್, ತೇಜಸ್ವಿ, ಪ್ರವೀಣ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.