ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತಾ ಸಮಾರಂಭ ಹಾಗೂ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವಕ್ಕೆ ಭಾನುವಾರ ಸಂಜೆ ಇಲ್ಲಿನ ಗಾಂಧಿ ಬಜಾರ್ನ ಬಸವೇಶ್ವರ ದೇವಸ್ಥಾನದಿಂದ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಉತ್ಸವ ಅರಂಭಿಸುವ ಮೂಲಕ ಚಾಲನೆ ನೀಡಲಾಯಿತು.

ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ, ಅಮೀರ್ ಅಹಮದ್ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿ ಗುಡಿ ಮುಖ್ಯರಸ್ತೆ, ಜೈಲ್ ಸರ್ಕಲ್ ಮೂಲಕ ಅಲ್ಲಮಪ್ರಭು ಮೈದಾನದವರೆಗೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಉತ್ಸವ ಸಾಗಿಬಂದಿತು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಸಾಗಿ ಬಂದರು.

ಗೋಪಿ ವೃತ್ತದ ಬಳಿ ಮೆರವಣಿಗೆ ಬಂದಾಗ ಅಲ್ಲಿಂದ ತೆರೆದ ವಾಹನದಲ್ಲಿ ಸಾಗಿ ಬಂದ ಬಿ.ಎಸ್.ಯಡಿಯೂರಪ್ಪ ಮೆರವಣಿಗೆಯ ಮುನ್ನಡೆಸಿದರು.

ರಂಭಾಪುರಿ ಪೀಠದ ಜಗದ್ಗುರು ವೀರಸೋಮೇಶ್ವರ ಸ್ವಾಮೀಜಿ, ಕಾಶಿ ಪೀಠದ ಜಗದ್ಗುರು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಕೇದಾರ ಪೀಠದ ಜಗದ್ಗುರು ಭೀಮಾ ಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭಕ್ತರು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿಬಂದರು.

ಮಳೆ ಅಡ್ಡಿ:

ಮೆರವಣಿಗೆ ಜೈಲು ವೃತ್ತವನ್ನು ದಾಟುತ್ತಿದ್ದಂತೆಯೇ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆ ಆರಂಭವಾಯಿತು. ಭಕ್ತರು ಮಳೆಯ ನಡುವೆ ಐವರು ಪೀಠಾಧೀಶರನ್ನು ಹೊತ್ತು ಸಾಗಿಬಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.