ಶಿವಮೊಗ್ಗ: ‘ಜೆ.ಎಚ್. ಪಟೇಲ್ ಬಡಾವಣೆಯಲ್ಲಿರುವ ಶ್ರೀ ವೀರಶೈವ ಸಾಂಸ್ಕೃತಿಕ ಭವನ ಆವರಣದಲ್ಲಿ ಅಂದಾಜು ₹ 40 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಪಶುಪತಿನಾಥ ಪಂಚಮುಖಿ ಶಿವಲಿಂಗದ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಧರ್ಮಸಭೆ ಕಾರ್ಯಕ್ರಮವನ್ನು ಏ. 28 ಮತ್ತು 29ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಕಾರ್ಯದರ್ಶಿ ಪಿ.ಎಸ್.ಹಾಲಸ್ವಾಮಿ ತಿಳಿಸಿದರು.

‘ಏ. 28ರಂದು ಶ್ರೀಗಳ ನೇತೃತ್ವದಲ್ಲಿ ಗಂಗಾಪೂಜೆ, ಗಣಪತಿ ಪೂಜೆ, ವಾಸ್ತುಹೋಮ, ವಾಸ್ತುಶಾಂತಿ ಹಾಗೂ ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂರ್ವಾಂಗ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದರು.

‘ಏ. 29ರಂದು ಬ್ರಾಹ್ಮಿ ಮುಹೂರ್ತದಲ್ಲಿ ರಂಭಾಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ದೇವಾಲಯ ಪ್ರವೇಶ, ವಿಗ್ರಹ ಸಂಸ್ಕಾರ, ಪ್ರಾಣ ಪ್ರತಿಷ್ಠಾಪನೆ. ಬಳಿಕ ಬೆಳಿಗ್ಗೆ 9 ಗಂಟೆಗೆ ಶಿಖರ ಕುಂಭಾಭಿಷೇಕ, ಪೂರ್ಣಾಹುತಿ ಮತ್ತು ಮಹಾಮಂಗಳಾರತಿ ನಡೆಯಲಿದೆ’ ಎಂದರು.

‘ಬೆಳಿಗ್ಗೆ 11 ಗಂಟೆಗೆ ನಡೆಯುವ ಧರ್ಮಸಭೆ ಸಾನ್ನಿಧ್ಯವನ್ನು ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ರೇಣುಕ ಶಿವಾಚಾರ್ಯ ಸ್ವಾಮಿ, ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿ, ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸುವರು. ಸಂಸದ ಬಿ.ವೈ.ರಾಘವೇಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ಸಾಂಸ್ಕೃತಿಕ ಭವನವು ಸರ್ಕಾರದ ಅನುದಾನ ಮತ್ತು ದಾನಿಗಳ ಸಹಾಯದಿಂದ 2022ರಲ್ಲಿ ನಿರ್ಮಾಣಗೊಂಡಿದ್ದು, ಅದರ ನಿರ್ಮಾಣದಲ್ಲಿ ಹಲವರ ಶ್ರಮ ಮಹತ್ತರವಾಗಿದೆ ಎಂದು ಅವರು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಹಾಗೂ ಸಮಿತಿಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಸಂದರ್ಭದಲ್ಲ್ಲಿ ಸಮಿತಿಯ ಅಧ್ಯಕ್ಷ ಜೆ.ವಿರೂಪಾಕ್ಷಪ್ಪ, ಉಪಾಧ್ಯಕ್ಷರಾದ ಎಸ್.ಪಿ. ಜಗನ್ನಾಥ್, ಎನ್.ಜಿ.ಪರಮೇಶ್ವರಪ್ಪ, ಜಿ.ಯು.ಈಶಪ್ರಭು, ಎಚ್.ಎಲ್.ರವಿ, ಎಚ್.ವಿ.ಸತೀಶ್, ಸಿ.ಯು.ಶಿವಶಂಕರ್, ಕೆ.ಸಿ.ರುದ್ರೇಶ್, ಎಂ.ಪಿ.ನಂದೀಶ್, ಎನ್.ಆರ್.ಕಾರ್ತಿಕ್, ಎಂ.ಪರಮೇಶ್ವರಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-42-229724008

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.