ಶಿವಮೊಗ್ಗ: ನೀಟ್–ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಮಂಗಳವಾರ ಇಲ್ಲಿನ ಗಾಂಧಿಬಜಾರ್ನ ಶಿವಪ್ಪ ನಾಯಕ ಪ್ರತಿಮೆ ಬಳಿ ಉತ್ತರ ಬ್ಲಾಕ್ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಖಾಲಿ ಸಿಲಿಂಡರ್ ಪ್ರದರ್ಶಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಪ್ರಶ್ನೆಪತ್ರಿಕೆ ಸೋರಿಕೆ ಇದು ಮೊದಲ ಬಾರಿಯಲ್ಲ. ಸರ್ಕಾರ ತನಿಖೆ ಮಾಡಿ ಆರೋಪಿಗಳನ್ನು ಶಿಕ್ಷಿಸುವ ಭರವಸೆಯನ್ನು ಪ್ರತಿ ಬಾರಿಯೂ ನೀಡುತ್ತದೆ. ಆದರೆ ಈವರೆಗೂ ಸೋರಿಕೆ ಮಾಡಿದ ಯಾರೊಬ್ಬರಿಗೂ ಶಿಕ್ಷೆ ಆಗಿಲ್ಲ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.

‘ಪ್ರಶ್ನೆಪತ್ರಿಕೆ ಸೋರಿಕೆಗೆ ಸರ್ಕಾರದ ಜೊತೆಗೆ ಇರುವವರು, ಕೋಚಿಂಗ್ ಸೆಂಟರ್ ನಡೆಸುವವರು ಮುಖ್ಯ ಕಾರಣ. ಇದರ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವರು ಸಮರ್ಪಕವಾಗಿ ಉತ್ತರಿಸುತ್ತಿಲ್ಲ. ಪರಿಣಾಮ ಲಕ್ಷಾಂತರ ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಸ್.ಟಿ. ಚಂದ್ರಶೇಖರ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ನಾಗರಾಜ್ ಕಂಕಾರಿ, ಫಾಲಾಕ್ಷಿ, ಯಮುನಾ ರಂಗೇಗೌಡ, ಭೋವಿ ನಿಗಮದ ಮಾಜಿ ಅಧ್ಯಕ್ಷ ಎಸ್. ರವಿಕುಮಾರ್, ಪ್ರಮುಖರಾದ ಪಿ.ಎಸ್. ಗಿರೀಶ್ ರಾವ್, ಸುವರ್ಣಾ ನಾಗರಾಜ್, ಸ್ಟೆಲ್ಲಾ ಮಾರ್ಟಿನ್, ರೇಷ್ಮಾ, ಚಿನ್ನಪ್ಪ, ರಂಗೇಗೌಡ, ಶ್ಯಾಮಸುಂದರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-42-2066606990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.