ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕಾರಿಪುರ | ಮಕ್ಕಳಲ್ಲಿ ಧನಾತ್ಮಕ ಭಾವನೆ ಮೂಡಿಸಿ: ಡಾ.ಅರವಿಂದ್

Published 23 ಜೂನ್ 2024, 15:46 IST
Last Updated 23 ಜೂನ್ 2024, 15:46 IST
ಅಕ್ಷರ ಗಾತ್ರ

ಶಿಕಾರಿಪುರ: ಮಕ್ಕಳಲ್ಲಿ ಧನಾತ್ಮಕ ಭಾವನೆಯನ್ನು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು ಎಂದು ಶಿವಮೊಗ್ಗ ವೈದ್ಯ ಎಸ್.ಟಿ. ಅರವಿಂದ್ ಸಲಹೆ ನೀಡಿದರು.

ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಬೋಧನೆ ಮಾಡುವ ಜತೆ ಶಿಕ್ಷಕರ ನಡತೆಯೂ ಮಾರ್ಗದರ್ಶನವಾಗಬೇಕು. ಮಕ್ಕಳ ಮನಸ್ಥಿತಿ ಅರಿತು ಬೋಧನೆ ಮಾಡಬೇಕು. ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಶಿಕ್ಷಕ ವಿದ್ಯಾರ್ಥಿಗೆ ಮುಕ್ತವಾಗಿ ಮಾತನಾಡುವ ಹಾಗೂ ಪ್ರಶ್ನಿಸುವ ಗುಣಗಳನ್ನು ಬೆಳೆಸುಬೇಕೇ ಹೊರತು ಮಗುವಿನ ಭಾವನೆಗೆ ಧಕ್ಕೆಯಾಗುವಂತೆ ಹೀಯಾಳಿಸಬಾರದು. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಕರು ಧನಾತ್ಮಕ ಮನೋಭಾವ ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಜಿ.ಎಸ್. ಶಿವಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಿಇಎಸ್ ಟ್ರಸ್ಟ್ ಆಪ್ರಸಮಾಲೋಚಕಿ ಎಸ್. ತನುಜಾ, ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರವೀಂದ್ರ, ಪದವಿಪೂರ್ವ ಕಾಲೇಜು ವೀರೇಂದ್ರ, ಮೈತ್ರಿ ಹಿರಿಯ ಪ್ರಾಥಮಿಕ ಶಾಲೆ ಆಡಳಿತಾಧಿಕಾರಿ ವಿಶ್ವನಾಥ್, ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಪ್ರಶಾಂತ್, ಉಪನ್ಯಾಸಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT