ಸೊರಬ: ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ತಾಲ್ಲೂಕಿನ ಹೊಡಬಟ್ಟೆ ಗ್ರಾಮದ 5 ತಿಂಗಳ ಗರ್ಭಿಣಿಯೊಬ್ಬರು ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ.

ಶ್ವೇತಾ(30) ಮೃತಪಟ್ಟವರು. ಮಾ.29ರಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೂಲತಃ ಶಿಕಾರಿಪುರ ತಾಲ್ಲೂಕು ಸಂಡಾ ಗ್ರಾಮದವರಾದ ಶ್ವೇತಾ ಅವರನ್ನು ಹೊಡಬಟ್ಟೆ ಗ್ರಾಮದ ನವೀನ್ ಎಂಬುವವರಿಗೆ 2020ರ ಮೇ ತಿಂಗಳಲ್ಲಿ ಮದುವೆ ಮಾಡಿ ಕೊಡಲಾಗಿತ್ತು. ದಂಪತಿಗೆ ಒಂದು ಹೆಣ್ಣು ಮಗುವಿದ್ದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಶ್ವೇತಾ ಶುಶ್ರೂಷಕಿಯಾಗಿ ಕೆಲಸ ಮಾಡುತ್ತಿದ್ದರು.

ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ಸೊರಬ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ವೇತಾ ಮಾವ ಸಣ್ಣಪ್ಪ, ಅತ್ತೆ ಜಾನಕಿ, ಹೇಮಂತ್, ದಿವ್ಯಾ ಎಂಬುವವರನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡವರಿಗಾಗಿ ಹುಡುಕಾಟ ನಡೆಸಿದ್ದಾರೆ.

‘ಶ್ವೇತಾ ಅವರಿಗೆ ಅತ್ತೆ, ಮಾವ, ಬಾವ ಹಾಗೂ ಆತನ ಪತ್ನಿ ಕಿರುಕುಳ ನೀಡುತ್ತಿದ್ದರು. ಆಸ್ತಿ ವಿಚಾರದಲ್ಲಿ ಪ್ರತಿ ದಿನ ಜಗಳ ಆಡುತ್ತಿದ್ದರು. ಈ ವಿಚಾರವನ್ನು ನಮಗೆ ತಿಳಿಸಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರೇ ಬೆಂಕಿ ಹಚ್ಚಿ ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ನ್ಯಾಯ ಕೊಡಿಸಿ’ ಎಂದು ಶ್ವೇತಾ ಕುಟುಂಬಸ್ಥರು ಅಳಲು ತೋಡಿಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-42-1989362359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.