ಶಿವಮೊಗ್ಗ: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶುಕ್ರವಾರ ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದಿದ್ದಾರೆ.

ಕೈದಿ ದೌಲತ್ ಖಾನ್ ಅಲಿಯಾಸ್ ಗುಂಡಾ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲ ಮತ್ತು ಮೂರು ಇಂಚು ಉದ್ದದ ಕೀ ಪ್ಯಾಡ್ ಮೊಬೈಲ್ ಫೋನ್ ದೊರೆತಿದೆ.

ಕಲ್ಲು ನುಂಗಿದ್ದೇನೆ ಎಂದಿದ್ದ: ಪ್ರಕರಣವೊಂದರಲ್ಲಿ ಈತನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ದೌಲತ್ ಖಾನ್ ಜೂನ್ 24ರಂದು ಜೈಲಿನ ಆಸ್ಪತ್ರೆಗೆ ಬಂದು, ಕಲ್ಲು ನುಂಗಿರುವುದಾಗಿ ವೈದ್ಯರಿಗೆ ತಿಳಿಸಿದ್ದ. ಅದಕ್ಕೆ ಅವರು ಔಷಧಿ ಕೊಟ್ಟಿದ್ದರು. ಹೊಟ್ಟೆ ನೋವು ಹೆಚ್ಚಾದ ಕಾರಣ ಪರೀಕ್ಷೆಗೆ ಒಳಪಡಿಸಿದ್ದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದರು. ಎಕ್ಸ್ರೇ ಮಾಡಿದಾಗ ದೌಲತ್ನ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ.

ನಿಷೇಧವಿದ್ದರೂ ಜೈಲಿನೊಳಗೆ ಮೊಬೈಲ್ ಫೋನ್ ಇಟ್ಟುಕೊಂಡ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ಪಿ. ರಂಗನಾಥ್ ಅವರು ಇಲ್ಲಿನ ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈಚೆಗೆ ಶಿವಮೊಗ್ಗ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿದ್ದ ಪೊಲೀಸರು, ಜೈಲಿನಲ್ಲಿ ಕೈದಿಗಳ ಸೆಲ್ನ ತಪಾಸಣೆ ನಡೆಸಿದ್ದರು. ಇದರಿಂದ ಹೆದರಿದ್ದ ದೌಲತ್, ತನ್ನ ಬಳಿ ಇದ್ದ ಮೊಬೈಲ್ ಫೋನ್ ನುಂಗಿದ್ದ ಎಂದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆಯೂ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.