ಹೊಳೆಹೊನ್ನೂರು: ಸಮೀಪದ ಹನುಮಂತಾಪುರ ಗ್ರಾಮದ ಅಡಿಕೆ ತೋಟದಲ್ಲಿ ಶಿವಮೊಗ್ಗದ ಅಕ್ಷರ ಕಾಲೇಜಿನ ಕನ್ನಡ ಉಪನ್ಯಾಸಕ ಎಚ್.ಆರ್.ಸುರೇಶ (58) ಅವರ ಮೃತದೇಹ ಸಂಪೂರ್ಣವಾಗಿ ಸುಟ್ಟಸ್ಥಿತಿಯಲ್ಲಿ ಪತ್ತೆಯಾಗಿದೆ.

ಗ್ರಾಮಸ್ಥರು ಭಾನುವಾರ ಬೆಳಿಗ್ಗೆ ಸುರೇಶ್ ಅವರ ತೋಟದ ಬಳಿ ಅವರ ಬೈಕ್ ನೋಡಿದ್ದಾರೆ. ಬಳಿಕ ತೋಟದ ಒಳಗೆ ಹೋಗಿ ನೋಡಿದಾಗ ದೇಹವೊಂದು ಬೆಂಕಿಯಲ್ಲಿ ಉರಿಯುತ್ತಿರುವುದು ಕಂಡುಬಂದಿದೆ. ಪಕ್ಕದಲ್ಲೇ ಬಿದ್ದಿದ್ದ ಬ್ಯಾಗ್ ಪರಿಶೀಲಿಸಿದಾಗ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಫೋನ್ ದೊರೆತಿದ್ದು, ಆಗ ಅವರು ಸುರೇಶ್ ಎಂಬುದು ದೃಢಪಟ್ಟಿದೆ.

ತಕ್ಷಣ ಪಟ್ಟಣದ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎಎಸ್ಪಿ ಜಿ.ಕಾರಿಯಪ್ಪ, ಪಿಐ ಶಿವಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸುರೇಶ್ ಅವರು ಕುಟುಂಬದ ಜೊತೆ ಶಿವಮೊಗ್ಗದಲ್ಲಿ ನೆಲೆಸಿದ್ದರು. ಶನಿವಾರ ಬೆಳಿಗ್ಗೆ 11 ಗಂಟೆಗೆ ಮದುವೆ ಸಮಾರಂಭಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ್ದರು. ಆದರೆ ಹನುಮಂತಾಪುರದ ಅವರ ತೋಟದಲ್ಲಿ ಶವ ಪತ್ತೆಯಾಗಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಯಿತು. ಸುರೇಶ್ ಅವರಿಗೆ ಪತ್ನಿ, ಮಗ ಹಾಗೂ ಮಗಳು ಇದ್ದಾರೆ. ಅಂತ್ಯಕ್ರಿಯೆ ಅವರ ತೋಟದಲ್ಲಿ ಸಂಜೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-42-1399161461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.