ಶಿವಮೊಗ್ಗ: ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜಿಲ್ಲೆಯಲ್ಲಿ ಜೂನ್ 28ರಂದು ನಡೆಯಲಿದೆ. ಅಭಿಯಾನದ ಯಶಸ್ಸಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಅಭಿಷೇಕ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

‘ಅಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮ ಲೆಕ್ಕಿಗರು ಸಹಕರಿಸಬೇಕು’ ಎಂದು ತಿಳಿಸಿದರು.

ಕೇಂದ್ರಗಳ ವ್ಯವಸ್ಥೆ: ಪೋಲಿಯೊ ಬೂತ್ಗಳನ್ನು ತೆರೆಯಲು ಶಾಲಾ ಕೊಠಡಿ, ಅಂಗನವಾಡಿ ಕಟ್ಟಡ ಸೇರಿ ಅಗತ್ಯವಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳನ್ನು ಒದಗಿಸಬೇಕು. ಜೂನ್ 27ರಿಂದ ಜುಲೈ 1ರವರೆಗೆ ಜಿಲ್ಲೆಯಾದ್ಯಂತ ನಿರಂತರ ವಿದ್ಯುತ್ ಸರಬರಾಜು ಇರುವಂತೆ ನೋಡಿಕೊಳ್ಳಲು ಮೆಸ್ಕಾಂಗೆ ಸೂಚಿಸಿದರು.

‘ಅಂದು ಎಲ್ಲ ಶಾಲೆಗಳೂ ಪೋಲಿಯೊ ಲಸಿಕೆ ನೀಡಲು ತೆರೆದಿರಬೇಕು. ಹಿಂದಿನ ದಿನವೇ ವಿದ್ಯಾರ್ಥಿಗಳಿಂದ ಜಾಥಾ ನಡೆಸಿ ಸುತ್ತಮುತ್ತ ಜಾಗೃತಿ ಮೂಡಿಸಬೇಕು. ಕಾರ್ಮಿಕ ಇಲಾಖೆ ಸೇರಿ ಇತರೆ ಇಲಾಖೆಗಳು ಅಭಿಯಾನ ಯಶಸ್ವಿಗೊಳಿಸಲು ಕೈಜೋಡಿಸಬೇಕು’ ಎಂದರು.

ಆರ್ಸಿಎಚ್ಒ ಡಾ.ಮಲ್ಲಪ್ಪ ಮಾತನಾಡಿ, ‘ದೇಶವು 2014ರಿಂದ ಪೋಲಿಯೊ ಮುಕ್ತವಾಗಿದೆ. 2011ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಡೆಯ ಪ್ರಕರಣ ಕಂಡುಬಂದಿತ್ತು. ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಲ್ಲಿ ಒಂದೆರಡು ಪ್ರಕರಣ ಅಲ್ಲಿಂದ ಬರುವ ಸಂಭವ ಇರುವ ಕಾರಣ ಅಭಿಯಾನ ನಿರಂತರವಾಗಿ ನಡೆಸಲಾಗುತ್ತಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ 4,39,013 ಮನೆಗಳಿಂದ 1,23,388 ಮಕ್ಕಳನ್ನು ಪೋಲಿಯೊ ಲಸಿಕೆ ನೀಡಲು ಗುರುತಿಸಲಾಗಿದೆ. ಟ್ರಾನ್ಸಿಟ್, ಮೊಬೈಲ್ ಬೂತ್ ಸೇರಿ ಒಟ್ಟು 1,069 ಬೂತ್ಗಳು ಅಂದು ಕಾರ್ಯ ನಿರ್ವಹಿಸಲಿವೆ. 3,960 ಲಸಿಕಾ ಕಾರ್ಯಕರ್ತರಿದ್ದಾರೆ. ಬೂತ್ಗೆ ಬಾರದೇ ಉಳಿದ ಮಕ್ಕಳನ್ನು ಗುರುತಿಸಲು ಜೂನ್ 29 ಮತ್ತು 30ರಂದು ಗ್ರಾಮೀಣ ಭಾಗದಲ್ಲಿ ಹಾಗೂ ಜುಲೈ 1ರಂದು ನಗರ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೊ ಲಸಿಕೆ ನೀಡಲಾಗುವುದು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಇತರೆಡೆ ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗುವುದು’ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸುಜಾತಾ, ಡಿಎಚ್ಒ ಡಾ.ನಟರಾಜ್, ಡಿಎಸ್ಒ ಡಾ.ನಾಗರಾಜ್ ನಾಯ್ಕ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗುಡದಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-42-187351049

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.