ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಸಂಬಂಧಿಕರ ನಡುವೆ ಜಗಳ: ವ್ಯಕ್ತಿ ಕೊಲೆ

Published 31 ಜುಲೈ 2023, 6:54 IST
Last Updated 31 ಜುಲೈ 2023, 6:54 IST
ಅಕ್ಷರ ಗಾತ್ರ

ಶಿವಮೊಗ್ಗ: ವಿದ್ಯಾನಗರದಲ್ಲಿ ಶನಿವಾರ ರಾತ್ರಿ ಸುಭಾಷ್ ನಗರದ ನಿವಾಸಿ ಜ್ಞಾನೇಶ್ವರ್ (45) ಅವರನ್ನು ಕೊಲೆ ಮಾಡಲಾಗಿದೆ.

ವಿದ್ಯಾನಗರದ ಸಂಬಂಧಿಕರ ಮನೆಗೆ ಜ್ಞಾನೇಶ್ವರ್ ತೆರಳಿದ್ದರು. ಆಗ ಕುಡಿದ ಮತ್ತಿನಲ್ಲಿ ಸಂಬಂಧಿಕರ ಜೊತೆಗೆ ಜಗಳ ನಡೆದಿದೆ. ಆ ಸಮಯದಲ್ಲಿ ಸಂಬಂಧಿಯೇ ಜ್ಞಾನೇಶ್ವರ್ ಅವರನ್ನು ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ಭಾನುವಾರ ಬೆಳಿಗ್ಗೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹವನ್ನು ಮಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT