ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾಳಕೊಪ್ಪ | ರಾಘವೇಂದ್ರ ಸ್ವಾಮಿ ರಥೋತ್ಸವದಲ್ಲಿ ಬಿ.ವೈ.ವಿಜಯೇಂದ್ರ ಭಾಗಿ

Published 22 ಆಗಸ್ಟ್ 2024, 15:13 IST
Last Updated 22 ಆಗಸ್ಟ್ 2024, 15:13 IST
ಅಕ್ಷರ ಗಾತ್ರ

ಶಿರಾಳಕೊಪ್ಪ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಉಡುಗಣಿ ಗ್ರಾಮದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುವಾರ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಭಕ್ತರು ಭಾಗವಹಿಸಿದ್ದರು. ಅನ್ನ ಸಂತರ್ಪಣೆ ವೇಳೆ ಶಾಸಕರು ಭಕ್ತರಿಗೆ ಪ್ರಸಾದ ಬಡಿಸಿದರು. ದೇವಸ್ಥಾನ ಸಮಿತಿಯಿಂದ ವಿಜಯೇಂದ್ರ ಅವರನ್ನು ಸನ್ಮಾನಿಸಲಾಯಿತು.

ದೇವಸ್ಥಾನ ಸಮಿತಿ ಅಧ್ಯಕ್ಷ ರಾಜೀವ್, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಸುಧೀರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೌಲಿ ಸುಬ್ರಮಣ್ಯ, ಉಡುಗಣಿ ಪ್ರಕಾಶ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೀರೇಂದ್ರ, ಶಿಕಾರಿಪುರ ಟೌನ್ ಅಧ್ಯಕ್ಷ ರಾಘವೇಂದ್ರ, ಉದ್ಯಮಿ ವಿಕ್ರಂ ಭಟ್, ಯುವ ಮೋರ್ಚಾ ಪ್ರಮುಖ ಬೆಣ್ಣೆ ಪ್ರವೀಣ್, ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶ್ ಸೇರಿ ಪ್ರಮುಖರು ಇದ್ದರು.

ಶಿರಾಳಕೊಪ್ಪ ಸಮೀಪದ ಉಡುಗಣಿ ಗ್ರಾಮದ ರಾಘವೇಂದ್ರ ಸ್ವಾಮಿ ರಥೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ವೈ. ವಿಜಯೇಂದ್ರ ಭಾಗವಹಿಸಿದ್ದರು
ಶಿರಾಳಕೊಪ್ಪ ಸಮೀಪದ ಉಡುಗಣಿ ಗ್ರಾಮದ ರಾಘವೇಂದ್ರ ಸ್ವಾಮಿ ರಥೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ವೈ. ವಿಜಯೇಂದ್ರ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT