ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ರಾಗಿಗುಡ್ಡ ಗಲಭೆ– ನ್ಯಾಯಾಂಗ ತನಿಖೆಗೆ ನಳಿನ್ ಕುಮಾರ್ ಕಟೀಲ್ ಆಗ್ರಹ

Published 5 ಅಕ್ಟೋಬರ್ 2023, 11:20 IST
Last Updated 5 ಅಕ್ಟೋಬರ್ 2023, 11:20 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ರಾಗಿಗುಡ್ಡದಲ್ಲಿ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯ. ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಮುಂದಾಗಲಿ ಎಂದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.

ಶಿವಮೊಗ್ಗದ ರಾಗಿಗುಡ್ಡ ಪ್ರದೇಶಕ್ಕೆ ಗುರುವಾರ ಬಿಜೆಪಿ ಸತ್ಯ ಶೋಧನಾ ತಂಡದೊಂದಿಗೆ ಭೇಟಿ ನೀಡಿದ ಅವರು, ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳ ಮನೆ ಮೇಲೆ ದಾಳಿ ನಡೆದಿದೆ. ಅಂದು

ಎರಡು ಗಂಟೆಗಳ ಕಾಲ ಕಲ್ಲು ತೂರಾಟ ನಡೆದಿದೆ. ಪ್ರತ್ಯಕ್ಷದರ್ಶಿ ಹಾಗೂ ಗಾಯಾಳುಗಳ ಭೇಟಿ ಮಾಡಿ ಚರ್ಚಿಸಿದ್ದೆನೆ. ಅವರು ನನಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಬಂದು ಸಿದ್ಧರಾಮಯ್ಯ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಲ್ಲಿ ಇಂತಹ ಅನೇಕ ಘಟನೆಗಳು ನಡೆದಿವೆ. ಇವೆಲ್ಲವನ್ನೂ ತನಿಖೆಗೆ ಒಳಪಡಿಸಬೇಕು ಎಂದರು.

ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ ವೈಫಲ್ಯದಿಂದಾಗಿಯೇ ಈ ಕೃತ್ಯ ನಡೆದಿದೆ. ಮೆರವಣಿಗೆಗೆ ಪೊಲೀಸರ ಅನುಮತಿ ತೆಗೆದುಕೊಳ್ಳಬೇಕಿತ್ತು. ಆದರೆ ಅದು ಆಗಿಲ್ಲ. ಗಲಭೆ ವೇಳೆ ಸ್ವತಃ ಎಸ್.ಪಿ. ಮೇಲೆಯೇ ದಾಳಿ ಮಾಡಯಾಗುತ್ತದೆ. ಪೊಲೀಸರ ಮೇಲೆಯೇ ದಾಳಿ ನಡೆದರೆ ಹೇಗೆ..? ಸಾಮಾನ್ಯ ಜನರಿಗೆ ರಕ್ಷಣೆ ಯಾರು ಕೊಡ್ತಾರೆ ಎಂಬುದೇ ಪ್ರಶ್ನೆಯಾಗಿದೆ ಎಂದರು.

ಇಲ್ಲಿ ಟಾರ್ಗೆಟ್ ಮಾಡಿ ಕಲ್ಲು ತೂರಾಟ ನಡೆಸಲಾಗಿದೆ. ಗಣೇಶೋತ್ಸವದಲ್ಲಿ ಭಾಗಿಯಾಗಿದ್ದ ಯುವಕರು, ಹಾಗೂ ಮಹಿಳೆಯರ ಮೇಲೆ ಟಾರ್ಗೆಟ್ ಮಾಡಲಾಗಿದೆ.

ಅವರ ಮನೆಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲಾಗಿದೆ. ಹಲ್ಲೆ ಕೇವಲ ಹಿಂದೂಗಳ ಮನೆಗಳ ಮೇಲೆ ನಡೆದಿದೆ.ಯಾವ ಮುಸಲ್ಮಾನರ ಮನೆ ಮೇಲೂ ನಡೆದಿಲ್ಲ ಎಂದರು.

ರಾಗಿಗುಡ್ಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬಂದು ಹೋದ ಬಳಿಕ ಹಿಂದೂ ಯುವಕರನ್ನು ಜೈಲಿಗೆ ಹಾಕುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.

ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಮೇಲೆ ಬಜರಂಗದಳದ ಯುವಕನೊಬ್ಬ ಮೊದಲು ಕಲ್ಲು ತೂರಿದ್ದು, ಗಲಭೆಗೆ ಪ್ರೇರಣೆಯಾಯಿತೇ ಎಂಬ ಪ್ರಶ್ನೆಗೆ, ತನಿಖೆಯ ದಿಕ್ಕುತಪ್ಪಿಸಲು ಇಂತಹ ವಿಚಾರ ಹರಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ಹಿಂದಿನ ಅವಧಿಯಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಿಸಲಾಗಿತ್ತು. ಈ ಅವಧಿಯಲ್ಲಿ ಔರಂಗಜೇಬನ ಪ್ರತಿಷ್ಠಾಪಿಸಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಸತ್ಯ ಶೋಧನಾ ಸಮಿತಿಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಡಾ.ಸಿ.ಎಸ್. ಅಶ್ವತ್ಥನಾರಾಯಣ, ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಭಾರತಿಶೆಟ್ಟಿ, ಎನ್.ರವಿಕುಮಾರ್, ಡಿ.ಎಸ್.ಅರುಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT