ಶಿವಮೊಗ್ಗ: ಇಲ್ಲಿನ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಜಾವಳ್ಳಿ ಸಮೀಪ ಶನಿವಾರ ಸಂಜೆ ಇಟ್ಟಿಗೆ ತುಂಬಿದ್ದ ಬೊಲೆರೋ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಗರದ ಬಾಲಾಜಿ ಲೇಔಟ್ ನಿವಾಸಿ ಸಂಪತ್ ಕುಮಾರ್ ಎಸ್. (33) ಮೃತ ವ್ಯಕ್ತಿ. ಅವರು ಜೆಎನ್ಸಿಸಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದೆ. ಬಳಿಕ ವಾಹನ ಮೊದಲು ಸಂಪತ್ ಕುಮಾರ್ ಚಲಾಯಿಸುತ್ತಿದ್ದ ಬುಲೆಟ್ ಬೈಕ್ಗೆ ಡಿಕ್ಕಿ ಹೊಡೆದು, ನಂತರ ಎದುರಿನಿಂದ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಸಂಪತ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಹಾಗೂ ಕಾರಿನಲ್ಲಿದ್ದ ಐದಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-42-1666492657

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.