ಸಾಗರ: ‘ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಮುಂದಾದರೆ ರೈತರು ದಂಗೆ ಏಳುತ್ತಾರೆ’ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಎಚ್ಚರಿಸಿದರು.

‘ಸಂಸದರು, ಇಲ್ಲಿನ ಶಾಸಕರ ಗಮನಕ್ಕೆ ತರದೇ ಪ್ರಸ್ತಾವಿತ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಬೇಸೂರು ಗ್ರಾಮದ ಭೂ–ಪ್ರದೇಶದ ವಿವರ ನೀಡಿರುವುದು ಖಂಡನೀಯ. ಈ ಬೆಳವಣಿಗೆ ಚುನಾಯಿತ ಪ್ರತಿನಿಧಿಗಳಿಗೆ ಮಾಡಿರುವ ಅವಮಾನವಾಗಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.

‘ಅಣು ಸ್ಥಾವರ ಸ್ಥಾಪನೆಗೆ ಅಗತ್ಯವಿರುವ ಔಪಚಾರಿಕತೆಗಳನ್ನು ಪೂರೈಸುವಂತೆ ಜಿಲ್ಲಾಧಿಕಾರಿ ಮೇಲೆ ಕೇಂದ್ರದಿಂದ ಒತ್ತಡ ಬರುತ್ತಿರುವ ಮಾಹಿತಿಯಿದೆ. ಮಲೆನಾಡಿನ ಜನಜೀವನವನ್ನು ಅಸ್ತವ್ಯಸ್ತಗೊಳಿಸುವ ಯೋಜನೆ ಇಲ್ಲಿಗೆ ಬಾರದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರಮುಖರಾದ ದಿನೇಶ್ ಕಾನುಗೋಡು, ಭಾಸ್ಕರ ಬೇಸೂರು, ಮೋಹನ, ದಯಾನಂದ, ನಾಗರಾಜ, ಆರನಬೈಲು ಮಂಜಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-42-1407752829

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.