ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ | ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಯತ್ನ: ಆರೋಪ

Published 1 ಏಪ್ರಿಲ್ 2024, 16:14 IST
Last Updated 1 ಏಪ್ರಿಲ್ 2024, 16:14 IST
ಅಕ್ಷರ ಗಾತ್ರ

ಸಾಗರ: ‘ತಾಲ್ಲೂಕಿನ ಯಡಜಿಗಳಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಕಬಳಿಸಲು ಮುಂದಾಗಿದ್ದಾರೆ. ಇದಕ್ಕೆ ಪಂಚಾಯಿತಿ ಆಡಳಿತ ಕಾನೂನು ಕ್ರಮ ಕೈಗೊಳ್ಳಲಿದೆ’ ಎಂದು ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಪ್ರವೀಣ್ ತಿಳಿಸಿದರು.

‘ಮಂಕಳಲೆ ಗ್ರಾಮದ ಸ.ನಂ. 96 ಮತ್ತು 68ರಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲು ಕೆಲವರು ಮುಂದಾಗಿದ್ದಾರೆ. ಈ ಬಗ್ಗೆ ಎಸಿಬಿ, ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ನಕಲಿ ದಾಖಲೆ ಸೃಷ್ಟಿಸಿ ಅದರ ಆಧಾರದ ಮೇಲೆ ಕೆಲವರು ಬ್ಯಾಂಕಿನಿಂದ ಸಾಲ ತೆಗೆದು ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಲು ಮುಂದಾಗಿದ್ದಾರೆ. ಇದರಲ್ಲಿ ಪ್ರಭಾವಿ ವ್ಯಕ್ತಿಗಳ ಪಾತ್ರವಿದೆ. ತಾಲ್ಲೂಕು ಆಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಹಕ್ರೆ ಒತ್ತಾಯಿಸಿದರು.

‘ಯಡಜಿಗಳಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೂ ಪ್ರದೇಶ ನಗರ ಪ್ರದೇಶಕ್ಕೆ ಹತ್ತಿರದಲ್ಲಿದ್ದು ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಜಾಗವಾಗಿದೆ. ಈ ಕಾರಣ ಕೆಲವರು ಕಾನೂನಿನ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಲಾಭ ಮಾಡಿಕೊಳ್ಳಲು ಮುಂದಾಗಿದ್ದಾರೆ’ ಎಂದು ಪಂಚಾಯಿತಿ ಸದಸ್ಯ ಗಿರೀಶ್ ಹಕ್ರೆ ಆರೋಪಿಸಿದರು.

ಪ್ರಮುಖರಾದ ಎಸ್.ಬಿ. ಮಂಜುನಾಥ್, ಮನುಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT