ಸಾಗರ: ಗಾಂಜಾ ಸೇವನೆಯಲ್ಲಿ ತೊಡಗಿದ್ದ ನಗರದ ಜೆಪಿ ನಗರ ಬಡಾವಣೆಯ ಸಮೀರ್ ಹಾಗೂ ಸಂದೀಪ ಅವರ ವಿರುದ್ಧ ನಗರ ಠಾಣೆ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.
ಸಾರ್ವಜನಿಕ ರಸ್ತೆಯಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ಈ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.