ಸಾಗರ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್ ಮೂಲಕ ಆಟೊ ಚಲಾಯಿಸುವ ಆಟೊ ಮಾಲಿಕರು, ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಗಾಂಧಿ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಟೊ ಚಾಲಕರಿಗೆ ವೈಯುಕ್ತಿಕವಾಗಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ನಂತರ ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಆಟೊ ಚಾಲಕರು ಯಾವ ರೀತಿ ತೊಂದರೆಗೆ ಒಳಗಾಗಿದ್ದರೊ ಅದೇ ಪರಿಸ್ಥಿತಿಯನ್ನು ಈಗ ಎದುರಿಸಬೇಕಾಗಿದೆ. ಗ್ಯಾಸ್ ಮೂಲಕ ಆಟೊ ಓಡಿಸುತ್ತಿರುವವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ನೆರವು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಆಟೊ ಚಾಲಕರು ಎಂದರೆ ಅವರು ಜನಸಾಮಾನ್ಯರ ಸಾರಥಿಗಳಾಗಿದ್ದು, ನಾಗರಿಕ ಸಮಾಜದ ಅವಿಭಾಜ್ಯ ಅಂಗವಾಗಿದ್ದಾರೆ. ಅವರು ಹಾಗೂ ಅವರ ಕುಟುಂಬದ ಹಿತವನ್ನು ಕಾಪಾಡುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ ಎಂದರು.

ಯೋಜನಾ ಪ್ರಾಧಿಕಾರದ ಸದಸ್ಯ ಐ.ಎನ್.ಸುರೇಶ್ ಬಾಬು, ಪ್ರಮುಖರಾದ ಎನ್.ಲಲಿತಮ್ಮ, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಕೆ.ಹೊಳಿಯಪ್ಪ, ಸೋಮಶೇಖರ್, ಸೈಯದ್ ಜಾಕೀರ್, ಎಲ್.ಚಂದ್ರಪ್ಪ, ನಾರಾಯಣ ಇದ್ದರು.

ಅಣ್ಣಪ್ಪ ಪ್ರಾರ್ಥಿಸಿದರು. ಚೇತನ್ ರಾಜ್ ಕಣ್ಣೂರು ಸ್ವಾಗತಿಸಿದರು. ಕನ್ನಪ್ಪ ವಂದಿಸಿದರು. ಡಿ.ದಿನೇಶ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-42-1899336284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.