ಸಾಗರ: ನಗರದ ಮಾರ್ಕೆಟ್-ತಿಲಕ್ ರಸ್ತೆಯಲ್ಲಿ ವೀರಶೈವ ಸಮಾಜ ನಿರ್ಮಿಸಿರುವ ಬಸವೇಶ್ವರ ವಾಣಿಜ್ಯ ಸಂಕೀರ್ಣ ಏ.20ರಂದು ಲೋಕಾರ್ಪಣೆಗೊಳ್ಳಲಿದೆ.

ಬೆಳಿಗ್ಗೆ 10.20ಕ್ಕೆ ನೂತನ ಕಟ್ಟಡದಲ್ಲಿ ಆನಂದಪುರಂನ ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಇಷ್ಟಲಿಂಗ ಪೂಜೆ ನೆರವೇರಿಸುವ ಮೂಲಕ ಸಂಕೀರ್ಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಏ.21ರಂದು ಬೆಳಿಗ್ಗೆ 7.30ಕ್ಕೆ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವತತ್ವ ಪೀಠದ ಬಸವ ಮರುಳಸಿದ್ಧ ಸ್ವಾಮೀಜಿ ಸಾನಿಧ್ಯದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ ಪ್ರಾತ್ಯಕ್ಷಿಕೆ ನಡೆಯಲಿದೆ.

ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಲಪ್ಪ ಹರತಾಳು, ವೀರಶೈವ ಸಮಾಜದ ಅಧ್ಯಕ್ಷ ಜಿ.ಎಸ್. ಬಸವರಾಜಪ್ಪ ಪಾಲ್ಗೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-42-205012936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.