ಶಿವಮೊಗ್ಗ: ಸವಿತಾ ಸಮಾಜದ ಆರಾಧ್ಯ ದೈವ ಆಗಿರುವ ಸವಿತಾ ಮಹರ್ಷಿಗಳು ಸಮಾಜದ ಮೂಲ ಪುರುಷರಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಅಭಿಷೇಕ್ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಸವಿತಾ ಸಮಾಜದ ಸಂಯುಕ್ತಾಶ್ರಯದಲ್ಲಿ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಸವಿತಾ ಸಮಾಜದವರಿಗೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಪ್ರತಿ ತಾಲ್ಲೂಕಿಗೆ 5 ರಿಂದ 10 ಜನರಿಗೆ ₹50 ಸಾವಿರದಿಂದ ₹1 ಲಕ್ಷದವರೆಗೆ ಸಾಲ ನೀಡುತ್ತಿದ್ದು ಅರ್ಹರು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಆಕಾಶವಾಣಿ ಸುಗಮ ಸಂಗೀತ ಕಲಾವಿದ ಮಂಜುನಾಥ್ ವಿಶೇಷ ಉಪನ್ಯಾಸ ನೀಡಿ, ‘ಸವಿತಾ ಎಂದರೆ ಬೆಳಕು ಅಥವಾ ಜ್ಞಾನ ಎಂದರ್ಥ. ಸವಿತಾ ಸಮಾಜದ ಮೂಲ ಪುರುಷರಾದ ಸವಿತಾ ಮಹರ್ಷಿಗಳು ಪರಶಿವನ ಬಲಗಣ್ಣಿನಿಂದ ಜನಿಸಿದವರಾಗಿದ್ದು ಸೂರ್ಯವಂಶದ ಕುಲದೈವರಾಗಿದ್ದಾರೆ. ಅಪಾರ ಜ್ಞಾನ ಹೊಂದಿದ್ದ ಇವರು ಸಾಮವೇದವನ್ನು ರಚಿಸಿದ್ದು, ಸಂಗೀತದ ಪ್ರತೀಕವಾಗಿದ್ದಾರೆ ಎನ್ನಬಹುದು. ಇವರ ಪುತ್ರಿ ಗಾಯತ್ರಿ ದೇವಿ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ’ ಎಂದು ತಿಳಿಸಿದರು.

ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸವಿತಾ ಸಮಾಜ ತನ್ನದೇ ಆದ ಪರಂಪರೆ ಹೊಂದಿದೆ. ಈ ಸಮಾಜದಲ್ಲಿ 27 ಉಪಜಾತಿಗಳಿದ್ದು, 2ಎ ವರ್ಗದಲ್ಲಿ ಬರುತ್ತದೆ ಎಂದು ವಿವರಿಸಿದರು.

ಸವಿತಾ ಸಮಾಜಕ್ಕೆ ಸೇರಿದ ಬಿಹಾರದ ಕರ್ಪೂರಿ ಠಾಕೂರ್ ಅವರಿಗೆ ಭಾರತ ಸರ್ಕಾರ ಮರಣೋತ್ತರ ಭಾರತರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಇವರು ಶೋಷಿತ ವರ್ಗದವರನ್ನು ಶೈಕ್ಷಣಿಕವಾಗಿ ಮೇಲೆ ತರಲು ಹೋರಾಡಿದ್ದರು. ಇಂತಹ ವ್ಯಕ್ತಿಗಳನ್ನು ಪಡೆದ ಸಮಾಜವು ಕೀಳರಿಮೆ ತೊರೆಯಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಇದರಿಂದ ಸಮಾಜದಲ್ಲಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಎಂ.ಜಿ.ಬಾಲು, ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎನ್.ಧರ್ಮರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.