ಶಿವಮೊಗ್ಗ: ವಿನೋಬನಗರದ ಶುಭಮಂಗಳ ಸಮುದಾಯ ಭವನದ ಪಕ್ಕದಲ್ಲಿರುವ ಶನೈಶ್ಚರ ಸ್ವಾಮಿ ದೇವಾಲಯದ 11ನೇ ವರ್ಷದ ಮಹಾರಥೋತ್ಸವ ಮೇ 16ರಂದು ಬೆಳಿಗ್ಗೆ 11-55ಕ್ಕೆ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಪ್ರಧಾನ ಕಾರ್ಯದರ್ಶಿ ಸ.ನ.ಮೂರ್ತಿ ತಿಳಿಸಿದರು.

‘ಸಮಿತಿಯ ಅಧ್ಯಕ್ಷರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾರ್ಗದರ್ಶನದಲ್ಲಿ ನಡೆಯುವ ರಥೋತ್ಸವದ ಅಂಗವಾಗಿ ಮೇ 15ರಂದು ಬೆಳಿಗ್ಗೆ ಕುಲದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಗಣಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಮೇ 14ರಂದು ಬೆಳಿಗ್ಗೆ 8 ಗಂಟೆಗೆ ವಿಶೇಷ ಪೂಜೆಗಳು ಜರುಗಲಿವೆ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಮಹಾರಥೋತ್ಸವಕ್ಕೆ ಸಂಕಲ್ಪ ಸೇವೆ ಸಲ್ಲಿಸುವವರು ₹ 101 ಪಾವತಿಸಿ ರಸೀದಿ ಪಡೆಯಬೇಕು’ ಎಂದು ಟ್ರಸ್ಟ್ ಉಪಾಧ್ಯಕ್ಷ ವಿ.ರಾಜು ತಿಳಿಸಿದರು.

‘ಮೇ 17ರಂದು ಪ್ರಭೋದೋತ್ಸವ 108 ಕಲಶ ಸ್ಥಾಪನೆ, ಕುಂಭಾಭಿಷೇಕ, ಹೋಮ, ಮಹಾಪೂಜೆ, ತೀರ್ಥಪ್ರಸಾದ ನಂತರ ಅನ್ನ ಸಂತರ್ಪಣೆ ನಡೆಯಲಿದೆ’ ಎಂದರು.

ಟ್ರಸ್ಟ್ ಪದಾಧಿಕಾರಿಗಳಾದ ಎಂ.ಪ್ರಭಾಕರ್, ಎಸ್.ಎನ್.ವೆಂಕಟೇಶ್, ಎಚ್.ಚಂದ್ರಶೇಖರ್, ಬಿ.ಡಿ.ರಮೇಶ್, ಎಸ್.ಎಚ್.ಸಂತೋಷ್, ಎಸ್.ವಿ. ಶ್ರೀನಿವಾಸ ರಾವ್, ಸ.ನ.ಚಂದ್ರಶೇಖರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-42-1297635787

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.