ಶಿವಮೊಗ್ಗ: ‘ಪರಿಸರಕ್ಕೆ ಮಾರಕವಾದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಏ.16ರಂದು ಸೈಕಲ್ ಹಾಗೂ ವಾಹನಗಳ ಜಾಥಾವನ್ನು ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆಯಿಂದ ಹಮ್ಮಿಕೊಳ್ಳಲಾಗಿದೆ’ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.

‘ಈ ಯೋಜನೆ ವಿರುದ್ಧ ಈಗಾಗಲೇ ಹಲವು ಹೋರಾಟಗಳನ್ನು ನಡೆಸಿದ್ದು, ಶಿವಮೊಗ್ಗ ನಗರದ ನಾಗರಿಕರಲ್ಲಿ ಈ ಯೋಜನೆ ಬಗ್ಗೆ ಅರಿವು ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜಾಥಾಕ್ಕೆ ಶಿವಮೊಗ್ಗ ನಗರದ ಅಣ್ಣಾ ಹಜಾರೆ ಹೋರಾಟ ಸಮಿತಿ, ಸೈಕಲ್ ಕ್ಲಬ್, ಸಾಹಸ ಮತ್ತು ಸಾಂಸ್ಕೃತಿಕ ಅಕಾಡೆಮಿ, ತರುಣೋದಯ ಘಟಕ, ಕರ್ನಾಟಕ ರಕ್ಷಣಾ ವೇದಿಕೆ, ಸಿಂಹಸೇನೆ ಬೆಂಬಲ ನೀಡಿ ಪಾಲ್ಗೊಳ್ಳುತ್ತಿವೆ. ಅಂದು ಬೆಳಿಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ವೈದ್ಯರಾದ ಶಿವರಾಮಕೃಷ್ಣ, ಪಿ.ನಾರಾಯಣ್ ಜಾಥಾವನ್ನು ಉದ್ಘಾಟಿಸಿ ಮುಖ್ಯ ಭಾಷಣ ಮಾಡಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಜಾಥಾದಲ್ಲಿ 400ಕ್ಕೂ ಹೆಚ್ಚು ಬೈಕ್ಗಳು, 200ಕ್ಕೂ ಹೆಚ್ಚು ಕಾರ್ಗಳು ಭಾಗವಹಿಸುತ್ತಿವೆ. ಜಾಥಾವು ಮಹಾವೀರ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. ಸಮಾರೋಪದ ವೇಳೆ ಬಹಿರಂಗ ಸಭೆ ನಡೆಯಲಿದೆ’ ಎಂದರು.

ಪ್ರಮುಖರಾದ ಶ್ರೀಕಾಂತ್, ಡಾ. ಶೇಖರ್ ಗೌಳೇರ್, ಜನಾರ್ಧನ್ ಪೈ, ಪರಿಸರ ರಮೇಶ್, ಎಸ್.ಬಿ. ಅಶೋಕ್ ಕುಮಾರ್, ಪರಿಸರ ಪ್ರಕಾಶ್, ಹರೀಶ್ ಕಾರ್ಣಿಕ್, ಎಸ್.ವಿಶ್ವೇಶ್ವರಯ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-42-1828987735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.