ಶಿವಮೊಗ್ಗ: ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಲು ಒತ್ತಾಯಿಸಿ ಏ. 16ರಂದು ಬೆಳಿಗ್ಗೆ 10.30ಕ್ಕೆ ಸೈಕಲ್, ಕಾರ್ ಮತ್ತು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ ಪ್ರಮುಖ ಅ.ನಾ. ವಿಜಯೇಂದ್ರರಾವ್ ಹೇಳಿದರು.

‘ರಾಷ್ಟ್ರಭಕ್ತರ ಬಳಗದ ನೇತೃತ್ವದಲ್ಲಿ ನಡೆಯಲಿರುವ ಈ ರ್ಯಾಲಿಗೆ ವಿವಿಧ ಸಾಮಾಜಿಕ ಹಾಗೂ ಪರಿಸರ ಸಂಘಟನೆಗಳು ಬೆಂಬಲ ಸೂಚಿಸಿವೆ. ಯೋಜನೆಯಿಂದ ಪಶ್ಚಿಮ ಘಟ್ಟ ಪ್ರದೇಶದ ಪರಿಸರ ಹಾಗೂ ಜೀವ ವೈವಿಧ್ಯಕ್ಕೆ ತೀವ್ರ ಹಾನಿಯಾಗಲಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.

‘₹10,700 ಕೋಟಿ ವೆಚ್ಚದ ಈ ಯೋಜನೆಯಿಂದ ರಾಜ್ಯಕ್ಕೆ ಯಾವುದೇ ಸ್ಪಷ್ಟ ಆರ್ಥಿಕ ಲಾಭವಿಲ್ಲ. ಬದಲಾಗಿ ಪರಿಸರ ಹಾನಿಯೇ ಹೆಚ್ಚು’ ಎಂದು ಸೈಕಲ್ ಕ್ಲಬ್ನ ಹಿರಿಯ ಸದಸ್ಯ ಡಾ.ಶೇಖರ್ ಗೌಳೇರ್ ಹೇಳಿದರು.

ರ್ಯಾಲಿಯಲ್ಲಿ ಅಂದಾಜು 500 ಬೈಕ್ಗಳು, 200 ಕಾರುಗಳು ಮತ್ತು 100 ಸೈಕಲ್ಗಳು ಭಾಗವಹಿಸುವ ನಿರೀಕ್ಷೆಯಿದೆ. ಬೈಕ್ ಮತ್ತು ಕಾರು ರ್ಯಾಲಿ ಫ್ರೀಡಂ ಪಾರ್ಕ್ನಿಂದ ಆರಂಭವಾಗಿ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಮಹಾವೀರ ವೃತ್ತ ತಲುಪಲಿದೆ. ಸೈಕಲ್ ರ್ಯಾಲಿ ಲಕ್ಷ್ಮೀ ಟಾಕೀಸ್ ವೃತ್ತ, ಜೈಲ್ ವೃತ್ತ, ದುರ್ಗಿಗುಡಿ ಮಾರ್ಗವಾಗಿ ಮಹಾವೀರ ವೃತ್ತಕ್ಕೆ ಸೇರುವುದಾಗಿ ಆಯೋಜಕರು ತಿಳಿಸಿದರು.

ಶ್ರೀಕಾಂತ್, ಪರಿಸರ ರಮೇಶ್, ವಾಗೀಶ್, ದಿಲೀಪ್ ನಾಡಿಗ್, ಜನಾರ್ಧನ್ ಪೈ, ಚನ್ನವೀರಪ್ಪ ಗಾಮನಗಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-42-325286872

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.